ಅಕ್ರಮ ಗಣಿಗಾರಿಕೆ ಆರೋಪ : ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಅನುಮತಿ ಪಡೆಯದೆ ಖಾಸಗಿ ಜಮೀನಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ರಾಜರಾಜೇಶ್ವರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ‌ದಾಖಲಿಸಲಾಗಿದೆ.
ಯಲಹಂಕ ತಹಶೀಲ್ದಾರ ಅನಿಲ್ ಅರಳೋಕರ ಅವರ ದೂರಿನ ಹಿನ್ನೆಲೆಯಲ್ಲಿ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ‌ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್​ ಬಳಸಿ ಸ್ಫೋಟ ಮಾಡಿರುವ ಆರೋಪ ಹೊರಿಸಲಾಗಿದೆ.
ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯ ಜಮೀನಿನಲ್ಲಿ ಕಳೆದ ಸೋಮವಾರ ಬ್ಲಾಸ್ಟಿಂಗ್ ಮಾಡಿ ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯರು‌‌ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಯಲಹಂಕ ತಹಶೀಲ್ದಾರರು ನಂತರ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ದ ಎಫ್‌ಐಆರ್ ದಾಖಲಾಗಿದೆ.

2 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement