ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ

ನವದೆಹಲಿ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಶುಕ್ರವಾರ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿಗೆ ಮೂರನೇ ಬಾರಿಗೆ ಸರ್ಕಾರ ರಚಿಸಲು ರಾಷ್ಟ್ರಪತಿಗಳು ಆಹ್ವಾನ ನೀಡಿದ್ದಾರೆ.
ನಂತರ ಮಾತನಾಡಿದ ಮೋದಿ, ”ರಾಷ್ಟ್ರಪತಿಗಳು ನನಗೆ ನಿಯೋಜಿತ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಲು ತಿಳಿಸಿದ್ದಾರೆ. ಜೂನ್​ 9ರಂದು ಸಂಜೆ ಪ್ರಮಾಣವಚನ ಸಮಾರಂಭ ನಡೆಯುವ ಬಗ್ಗೆ ಮಾಹಿತಿ ನೀಡಿದ್ದೇನೆ. ನಾವು ಸಚಿವರ ಪಟ್ಟಿಯನ್ನು ರಾಷ್ಟ್ರಪತಿಗೆ ರವಾನಿಸಲಿದ್ದೇವೆ ಎಂದು ತಿಳಿಸಿದರು.
ರಾಷ್ಟ್ರಪತಿ ಭೇಟಿಗೂ ಮುನ್ನ ಪ್ರಧಾನಿ ಮೋದಿ ಮಾಜಿ ಉಪಪ್ರಧಾನಿ ಎಲ್‌.ಕೆ. ಅಡ್ವಾಣಿ, ಬಿಜೆಪಿ ಮಾಜಿ ಅಧ್ಯಕ್ಷ ಮುರಳಿ ಮನೋಹರ ಜೋಶಿ ಮತ್ತು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರನ್ನು ಭೇಟಿಯಾದರು.
ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ರಚಿಸಲು ಹಕ್ಕು ಮಂಡಿಸುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಬೆಂಬಲಿಗ ಸಂಸದರ ಪಟ್ಟಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದರು. ಬಿಜೆಪಿ ನೇತೃತ್ವದ ಎನ್‌ಡಿಎ 293 ಸ್ಥಾನಗಳನ್ನು ಪಡೆದುಕೊಂಡಿದ್ದು, 543 ಸದಸ್ಯ ಬಲದ ಲೋಕಸಭೆಯಲ್ಲಿ ಬಹುಮತ ಹೊಂದಿದೆ.

ಪ್ರಮುಖ ಸುದ್ದಿ :-   ಆಪರೇಷನ್ ಸಿಂಧೂರ | ಅಮೃತಸರದ ಗೋಲ್ಡನ್​ ಟೆಂಪಲ್ ಮೇಲೆ ದಾಳಿಗೆ ಯತ್ನಿಸಿದ್ದ ಪಾಕಿಸ್ತಾನ; ದಾಳಿ ವಿಫಲಗೊಳಿಸಿದ ಭಾರತೀಯ ಸೇನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement