ನೀಟ್‌ ಪಿಜಿ ಪರೀಕ್ಷೆ- 2021: ಸೆಪ್ಟೆಂಬರ್ 11ರಂದು ಪರೀಕ್ಷೆ – ಕೇಂದ್ರ ಸಚಿವ ಮಾಂಡವೀಯ

ನವದೆಹಲಿ: ನೀಟ್‌ (NEET) ಪಿಜಿ- 2021 ಪರೀಕ್ಷೆಯು ಸೆಪ್ಟೆಂಬರ್ 11ರಂದು ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ವಿಷಯವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್​ಸುಖ್ ಮಾಂಡವೀಯ ಮಂಗಳವಾರ ಟ್ವೀಟ್ ಮೂಲಕ ತಿಳಿಸಿದ್ದಾರೆ. ಕೊವಿಡ್ ಶಿಷ್ಟಾಚಾರಗಳನ್ನು ಅನುಸರಿಸಿಯೇ ಸೆಪ್ಟೆಂಬರ್ 12ರಂದು ನೀಟ್ (ಯುಜಿ) ಪರೀಕ್ಷೆ ನಡೆಯಸಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ (ಜುಲೈ 12)ದಂದು ಪ್ರಕಟಿಸಿತ್ತು.
ಎನ್​ಟಿಎ ವೆಬ್​ಸೈಟ್ ಮೂಲಕ ಇಂದಿನಿಂದಲೇ (ಜುಲೈ 12) ಅರ್ಜಿ ಸಲ್ಲಿಸಬಹುದಾಗಿದೆ. ಈ ಮೊದಲು ಪರೀಕ್ಷಾ ದಿನಾಂಕವನ್ನು 1ನೇ ಆಗಸ್ಟ್​ಗೆ ನಿಗದಿಪಡಿಸಲಾಗಿತ್ತು. ಸಾಮಾಜಿಕ ಅಂತರ ಪಾಲನೆಯನ್ನು ದೃಢಪಡಿಸುವ ಉದ್ದೇಶದಿಂದಾಗಿ ಈ ವರ್ಷ ಪರೀಕ್ಷಾ ನಡೆಯುವ ನಗರಗಳ ಸಂಖ್ಯೆಯನ್ನು 198ಕ್ಕೆ ಹೆಚ್ಚಿಸಲಾಗಿದೆ. ಈ ಮೊದಲು 155 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿತ್ತು ಎಂದು ಕೇಂದ್ರ ಶಿಕ್ಷಣ ಇಲಾಖೆ ತಿಳಿಸಿದೆ.
ಈ ವರ್ಷ ಒಟ್ಟು 3862 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಹಿಂದೆ 2020 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷಾ ಕೇಂದ್ರ ಪ್ರವೇಶಿಸುವ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿಯೇ ಮಾಸ್ಕ್​ ವಿತರಿಸಲಾಗುವುದು ಎಂದು ಶಿಕ್ಷಣ ಸಚಿವಾಲಯ ಹೇಳಿದೆ.
ಕಳೆದ ವರ್ಷ ಸೆಪ್ಟೆಂಬರ್ 13ರಂದು ನೀಟ್ ಪರೀಕ್ಷೆ ನಡೆಸಲಾಗಿತ್ತು. ಒಟ್ಟು 13.66 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 7,71,500 ವಿದ್ಯಾರ್ಥಿಗಳು ಅರ್ಹತೆ ಪಡೆದುಕೊಂಡಿದ್ದರು. ನೀಟ್ ಪರೀಕ್ಷೆಯನ್ನು 11 ಭಾಷೆಗಳಲ್ಲಿ ಬರೆಯಲು ಅವಕಾಶವಿದೆ. ಕನ್ನಡ, ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಒಡಿಯಾ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ನೀಟ್ ಪರೀಕ್ಷೆ ಬರೆಯಬಹುದಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಶಾಲೆಯಲ್ಲೇ ಹೊಡೆದಾಡಿಕೊಂಡ ಪ್ರಾಂಶುಪಾಲೆ-ಶಿಕ್ಷಕಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement