ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ ; ಕೋಡಿಮಠದ ಸ್ವಾಮೀಜಿ ಭವಿಷ್ಯ

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ತಿಕ್ಕಾಟ ಜೋರಾಗಿದ್ದು, ಇದರ ಮಧ್ಯೆ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯ ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿದ ಕೋಡಿಮಠ ಶ್ರೀಗಳು, ಸಂಕ್ರಾಂತಿ ನಂತರ ಈ ಬಗ್ಗೆ ಸ್ಪಷ್ಟವಾಗಿ ಹೇಳಬಹುದು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಹುದ್ದೆ ಕಿತ್ತುಕೊಳ್ಳುವುದು ಅಷ್ಟು ಸುಲಭವಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಅಧಿಕಾರ ಬಿಟ್ಟು ಕೊಟ್ಟರೆ ಬೇರೆಯರಿಗೆ ಅವಕಾಶ ಸಿಗುತ್ತದೆ. ಇಲ್ಲದಿದ್ದರೆ ಅದನ್ನು ಕಿತ್ತುಕೊಳ್ಳುವುದು ಅಷ್ಟು ಸುಲಭವಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ತಾನೇ ಅಧಿಕಾರ ಬಿಟ್ಟು ಕೊಡುವವರೆಗೂ ಬೇರೆಯವರಿಗೆ ಅಧಿಕಾರ ಸಿಗುವುದು ಅಷ್ಟು ಸುಲಭವಲ್ಲ ಎಂದು ಸ್ವಾಮೀಜಿ ಹೇಳಿದ್ದಾರೆ.
ಅರಸನ ಅರಮನೆಗೆ ಕಾರ್ಮೋಡ ಕವಿದಿದೆ. ಅರಸನ ಭಂಡಾರ ಎಂದರೆ ಬಜೆಟ್ ಎಂದು ಹೇಳಿರುವ ಶ್ರೀಗಳು ಈ ವರ್ಷದ ಬಜೆಟ್​ ಮುಗಿದ ಬಳಿಕ ಮುಖ್ಯಮಂತ್ರಿಗಳು ಸ್ಥಾನ ಬಿಟ್ಟು ಕೊಟ್ಟರೆ ಬೇರೆಯವರಿಗೆ ಅವಕಾಶ ಸಿಗುತ್ತದೆ. ಇಲ್ಲದಿದ್ದರೆ ಅದು ಸಿಗುವುದು ಸುಲಭವಲ್ಲ ಎಂದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಬೆಂಬಲಿಗರ ನಡುವೆ ಪರ, ವಿರೋಧ ಅಭಿಪ್ರಾಯಗಳ ನಡುವೆ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರಾಜ್ಯ ರಾಜಕಾರಣದ ಬಗ್ಗೆ ಭವಿಷ್ಯ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement