ವಿದ್ಯಾರ್ಥಿಗಳೇ ಗಮನಿಸಿ…: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ( Karnataka Second PUC Annual Examination 2023 ) ಅಂತಿಮ ವೇಳಾಪ್ಟಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದ್ದು, 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ( II PUC 09-03-2023 ರಿಂದ ದಿನಾಂಕ 29-03-2023ರ ವರೆಗೆ ನಡೆಯಲಿದೆ. ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.sslc.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಲಾಗಿದೆ.

ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ,ಸಿ, ನಾಗೇಶ್ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ
09-03-2023, ಗುರುವಾರ – ಕನ್ನಡ, ಅರೇಬಿಕ್
11-03-2023, ಶನಿವಾರ – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
13-03-2023, ಸೋಮವಾರ – ಅರ್ಥಶಾಸ್ತ್ರ
14-03-2023, ಮಂಗಳವಾರ – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
15-03-2023, ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
16-03-2023, ಗುರುವಾರ – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
17-03-2023, ಶುಕ್ರವಾರ – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
18-03-2023, ಶನಿವಾರ – ಭೂಗೋಶಶಾಸ್ತ್ರ, ಜೀವಶಾಸ್ತ್ರ
20-03-2023, ಸೋಮವಾರ – ಇತಿಹಾಸ, ಭೌತಶಾಸ್ತ್ರ
21-03-2023, ಮಂಗಳವಾರ – ಹಿಂದಿ
23-03-2023, ಗುರುವಾರ – ಇಂಗ್ಲೀಷ್
25-03-2023 ಶನಿವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
27-03-2023, ಸೋಮವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
29-03-2023, ಬುಧವಾರ – ಸಮಾಜ ವಿಜ್ಞಾನ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

ಪ್ರಮುಖ ಸುದ್ದಿ :-   ಕರ್ನಾಟಕ ಬಿಜೆಪಿ ಹಂಚಿಕೊಂಡ ಅನಿಮೇಟೆಡ್ ವೀಡಿಯೊ ತೆಗೆದುಹಾಕಿ ; ಎಕ್ಸ್​ ಗೆ ಚುನಾವಣಾ ಆಯೋಗ ಸೂಚನೆ

 

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement