ಕಾರವಾರ ಮೆಡಿಕಲ್‌ ಕಾಲೇಜಿನಲ್ಲಿ 27 ವಿದ್ಯಾರ್ಥಿಗಳಿಗೆ ಕೊರೊನಾ, ಇದರಲ್ಲಿ ಲಸಿಕೆ ಪಡೆದವರು 24..!

ಕಾರವಾರ:ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ 27  ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ.
ಲಸಿಕೆ ಪಡೆದುಕೊಂಡ 24 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.ಅತೀ ಹೆಚ್ವು ವಿದ್ಯಾರ್ಥಿಗಳಿಗೆ ಕೊರೊನಾ ಹಿನ್ನೆಲೆಯಲ್ಲಿ ಮೆಡಿಕಲ್ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದ್ದು ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಹೊರತುಪಡಿಸಿ 450 ಪ್ರಥಮ ,ದ್ವಿತೀಯ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಣೆ ಮಾಡಿದ್ದಾರೆ. ಕಳೆದ ಎರೆಡು ದಿನದ ಹಿಂದೆ ಮೂವರು ವೈದ್ಯಕೀಯ ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಇವರ  ಸಂಪರ್ಕಕ್ಕೆ ಬಂದ ಒಟ್ಟು  24 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದ್ದು ಉತ್ತರ ಕನ್ಡನ ಜಿಲ್ಲೆಯಲ್ಲಿ ಮಂಗಳವಾರ 66 ಜನರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಇದರಲ್ಲಿ ಕಾರವಾರದಲ್ಲಿ 36 ಸೋಂಕಿತರು ಪತ್ತೆಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸದ್ಯ 303 ಕೊರೊನಾ ಸೋಂಕಿತರ ಸಕ್ರಿಯವಾಗಿದ್ದು ಇದರಲ್ಲಿ ಹೋಮ್ ಐಸೊಲೇಷನ್ 263 ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ 40 ಜನರು ಜಿಲ್ಲೆಯ ವಿವಿಧ ಕೊವಿಡ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಮುಖ ಸುದ್ದಿ :-   ನಾಳೆ (ಮೇ 9) ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಕಟ ; ಫಲಿತಾಂಶ ಎಲ್ಲಿ ನೋಡುವುದು..? ಇಲ್ಲಿದೆ ಮಾಹಿತಿ

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement