ಚಿತ್ತಾಪುರ : ಭೀಕರ ಅಪಘಾತ, 3 ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಮಂದಿ ಸಾವು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ‌ ಸಿಮೆಂಟ್ ತುಂಬಿದ ಟ್ಯಾಂಕರ್ ಹಾಗೂ ಆಟೋ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ನಜ್ಮಾ ಬೇಗಂ (28), ಬಿಬಿ ಫಾತೀಮಾ (12) , ಅಬುಬಕರ್ (4) ಬೀಬಿ ಮರಿಯಮ್ಮ (ಮೂರು ತಿಂಗಳು), ಮಹ್ಮದ್ ಪಾಶಾ (20), ಆಟೋ ಚಾಲಕ ಬಾಬಾ (35) ಎಂದು ಗುರುತಿಸಲಾಗಿದೆ.ಈ ಅಪಘಾತದಲ್ಲಿ ಮಹಮದ್ ಹುಸೇನ್ ಎಂಬ ಬಾಲಕನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ನಿವಾಸಿಗಳು ಎಂದು ಹೇಳಲಾಗಿದೆ. ಇವರೆಲ್ಲ ಆಧಾರ್ ಕಾರ್ಡ್ ತಿದ್ದುಪಡಿಗೆ ಆಟೋದಲ್ಲಿ ಚಿತ್ತಾಪುರಕ್ಕೆ ಹೋಗಿದ್ದರು. ಕೆಲಸ ಮುಗಿಸಿಕೊಂಡು ವಾಪಸ್‌ ಕುಟುಂಬ ಸಮೇತ ಊರಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಸಿಮೆಂಟ್ ಕಾರ್ಖಾನೆಯ ಹಾರೂಬೂದಿ ತುಂಬಿದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಇಡೀ ಆಟೋ ನುಜ್ಜುಗುಜ್ಜಾಗಿದೆ.
ಟ್ಯಾಂಕರ್ ಚಾಲಕ ಪರಾರಿಯಾಗಿದ್ದು, ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ, ಸುದ್ದಿ ತಿಳಿಯುತ್ತಿದ್ದಂತೆ ಎಸ್ಪಿ ಅಡೂರು ಶ್ರೀನಿವಾಸಲು, ಡಿವೈಎಸ್ ಪಿ, ಸಿಪಿಐ ಹಾಗೂ ಪಿಎಸ್‌ಐ ತಿರುಮಲೇಶ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ರಸ್ತೆಯಲ್ಲಿನ ಶವಗಳನ್ನು ತೆಗೆಯವ ಕಾರ್ಯ ನಡೆದಿದೆ. ಅಪಘಾತದಿಂದಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

ಪ್ರಮುಖ ಸುದ್ದಿ :-   ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ : ತಾಯಿ-ಮಗು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement