
ಬೆಂಗಳೂರು : ಮಹಿಳಾ ನೌಕರರಿಗೆ ಮುಟ್ಟಿನ ರಜೆ (ಋತುಚಕ್ರ) ರಜೆ ನೀಡಲು ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ತಿಂಗಳಲ್ಲಿ ಒಂದು ದಿನಮುಟ್ಟಿನ ರಜೆ ನೀಡಬೇಕು. ತಿಂಗಳಲ್ಲಿ ಒಂದು ದಿನ ವರ್ಷಕ್ಕೆ 12 ದಿನ ವೇತನ ಸಹಿತ ರಜೆ ನೀಡುವಂತೆ ಸರ್ಕಾರ ಆದೇಶಿಸಿದೆ.
ಇತ್ತೀಚೆಗಷ್ಟೇ ಋತುಚಕ್ರ ರಜೆ ನೀಡಲು ಕ್ಯಾಬಿನೆಟ್ ನಿರ್ಣಯಿಸಿತ್ತು. ಕ್ಯಾಬಿನೆಟ್ ನಿರ್ಣಯದಂತೆ ಕಾರ್ಮಿಕ ಇಲಾಖೆ ಅಧಿಕೃತ ಅದೇಶ ಹೊರಡಿಸಿದೆ. 2 ಷರತ್ತುಗಳನ್ನ ವಿಧಿಸಿ ರಜೆ ನೀಡಲು ಸಂಸ್ಥೆಗಳಿಗೆ ಸೂಚಿಸಿದೆ. ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ಋತುಚಕ್ರ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ಅವಕಾಶ ಇರುವುದಿಲ್ಲ.
ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ. 18 ವರ್ಷದಿಂದ 52 ವರ್ಷದ ವಯೋಮಿತಿಯ ಎಲ್ಲಾ ಮಹಿಳಾ ನೌಕರರಿಗೆ ರಜೆ ನೀಡಬೇಕಾಗುತ್ತದೆ.



ನಿಮ್ಮ ಕಾಮೆಂಟ್ ಬರೆಯಿರಿ