ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ (Obulapuram Mining Case) ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhan Reddy) ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು, ಈ ಹಿನ್ನೆಲೆಯಲ್ಲಿ ತೆಲಂಗಾಣದ ಚಂಚಲಗುಡ ಜೈಲಿರುವ ಜನಾರ್ದನ ರೆಡ್ಡಿ ಈಗ ಶಾಸಕ ಸ್ಥಾನವನ್ನೂ ಕಳೆದುಕೊಂಡಿದ್ದಾರೆ.
ಈ ಬಗ್ಗೆ ಅಧಿಕೃತ ಆದೇಶ ಹೊರ ಬಿದ್ದಿದೆ. ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ 6 ವರ್ಷಗಳ ಕಾಲ ಅನರ್ಹಗೊಳಿಸಿ ಆದೇಶ ಹೊರಡಿಸಲಾಗಿದೆ.

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸುದೀರ್ಘ ವಿಚಾರಣೆ ನಡೆಸಿದ ನಂತರ ಹೈದರಾಬಾದ್ ಸಿಬಿಐ ಕೋರ್ಟ್ 7 ವರ್ಷಗಳ ಶಿಕ್ಷೆ ನೀಡಿತ್ತು. ಶಾಸಕ ಸ್ಥಾನ ಉಳಿಸಿಕೊಳ್ಳಲು ಶಿಕ್ಷೆ ಕಡಿಮೆ ಮಾಡಿ ಎಂದು ರೆಡ್ಡಿ ಕೋರ್ಟ್​ ಮುಂದೆ ಮನವಿ ಮಾಡಿದ್ದರು. ಆದರೆ ಕೋರ್ಟ್​ ರೆಡ್ಡಿ ಮನವಿಯನ್ನು ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ 2 ವರ್ಷ ಅಥವಾ ಅದಕ್ಕಿತಂತ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ.

ಪ್ರಮುಖ ಸುದ್ದಿ :-   ವಿಜಯಪುರದಲ್ಲಿ ಪಾಕ್ ಪರ ಪೋಸ್ಟ್ ಮಾಡಿದ ವಿದ್ಯಾರ್ಥಿನಿ ; ದೂರಿನ ನಂತರ ಕ್ಷಮೆಯಾಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement