ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಸಂಜಯ ಶೆಟ್ಟಣ್ಣವರ ನೇಮಕ

ಬೆಂಗಳೂರು :ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಸಂಜಯ ಬಿ. ಶೆಟ್ಟಣ್ಣವರ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಸಂಜಯ ಶೆಟ್ಟೆಣ್ಣವರ ಅವರು ಸದ್ಯ ಬೆಂಗಳೂರಿನ ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಳಗಾವಿಯರಾದ ಸಂಜಯ ಶೆಟ್ಟೆಣ್ಣವರ ಈ ಮೊದಲು ವಿಜಯಪುರ ಹಾಗೂ ಹಾವೇರಿ ಜಿಲ್ಲಾಧಿಕಾರಿಯಾಗಿ ಹಾಗೂ ಬೆಳಗಾವಿ ಕಾಡಾದಲ್ಲಿಯೂ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಅವರು ಶುಕ್ರವಾರ ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಜೋಗಿ, ಕಬ್ಬಿನಾಲೆ, ಶಿವಾನಂದ ಹೆಗಡೆಗೆ ಕೆರೆಮನೆ ʼಮಹಾಬಲ ಪ್ರಶಸ್ತಿʼ ಪ್ರಕಟ

ನಿಮ್ಮ ಕಾಮೆಂಟ್ ಬರೆಯಿರಿ

advertisement