ಕಾಶ್ಮೀರ : ಕುಪ್ವಾರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಐವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಸೇನೆ ಎನ್‌ಕೌಂಟರ್‌ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಎನ್‌ಕೌಂಟರ್‌ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರ ಎಡಿಜಿಪಿ ವಿಜಯಕುಮಾರ ತಿಳಿಸಿದ್ದಾರೆ.
ಉತ್ತರ ಕಾಶ್ಮೀರ ಜಿಲ್ಲೆಯ ಎಲ್‌ಒಸಿ ಬಳಿಯ ಜುಮಗುಂಡ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಿರ್ದಿಷ್ಟ ಮಾಹಿತಿ ಆಧರಿಸಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಮುಂಜಾನೆ ಎನ್‌ಕೌಂಟರ್ ಪ್ರಾರಂಭವಾಯಿತು. ಕುಪ್ವಾರದ ಕೆರಾನ್ ಸೆಕ್ಟರ್‌ನಲ್ಲಿ LOC ಉದ್ದಕ್ಕೂ ಒಳನುಸುಳುವಿಕೆಯ ಪ್ರಯತ್ನವನ್ನು ಇಂದು ಬೆಳಿಗ್ಗೆ ವಿಫಲಗೊಳಿಸಲಾಯಿತು. ಐವರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ ಮತ್ತು ಶೋಧ ಕಾರ್ಯಗಳು ಪ್ರಗತಿಯಲ್ಲಿವೆ ಎಂದು ಭಾರತೀಯ ಸೇನೆ ಹೇಳಿಕೆಯಲ್ಲಿ ತಿಳಿಸಿದೆ.
ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ವಿಜಯ್ ಕುಮಾರ್ ಅವರು ಟ್ವಿಟರ್‌ನಲ್ಲಿ, ಐದು (05) ವಿದೇಶಿ #ಭಯೋತ್ಪಾದಕರು ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟರು. ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಜೂನ್ 13 ರಂದು ಕುಪ್ವಾರದ ಎಲ್‌ಒಸಿ ಬಳಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಾಶ್ಮೀರ ವಲಯ ಪೊಲೀಸರು ಈ ಸುದ್ದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ದೋಬನಾರ್ ಮಚ್ಚಲ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ, ಜೂನ್ 2 ರಂದು, ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಯಿತು.

ಪ್ರಮುಖ ಸುದ್ದಿ :-   ಕೋವಿಡ್ ಲಸಿಕೆಗಳಿಗೂ ಹೃದಯಾಘಾತದ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ; ತಳ್ಳಿಹಾಕಿದ ಏಮ್ಸ್ ವೈದ್ಯರು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement