ಧಾರವಾಡ: 11 ದಿನಗಳ ವರೆಗೆ ಗಣೇಶೋತ್ಸವ ಆಚರಣೆಗೆ ಅವಕಾಶ

ಧಾರವಾಡ: ಜಿಲ್ಲೆಯಲ್ಲಿ ಶ್ರೀ ಗಣೇಶೋತ್ಸವವನ್ನು ಗರಿಷ್ಠ 11 ದಿನಗಳ ವರೆಗೆ ಕೋವಿಡ್ ಮಾರ್ಗಸೂಚಿಗಳೊಂದಿಗೆ ಆಚರಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾದಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಸೆ.5 ರಂದು ಹೊರಡಿಸಿದ್ದ ಮಾರ್ಗಸೂಚಿಗಳಲ್ಲಿ ಗರಿಷ್ಠ 5 ದಿನ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗಿತ್ತು. ಈಗ ಪರಿಷ್ಕೃತ ಆದೇಶದಲ್ಲಿ ಈ ನಿಯಮ‌ ಸಡಿಲಿಸಿ ಜಿಲ್ಲೆಯಲ್ಲಿ ಈ ಹಿಂದೆ ಸಾಂಪ್ರದಾಯಿಕವಾಗಿ 11 ದಿನಗಳ ವರೆಗೆ ಗಣೇಶೋತ್ಸವ ಆಚರಿಸುತ್ತಿದ್ದವರಿಗೆ ಈ ಬಾರಿಯೂ ಗರಿಷ್ಠ 11 ದಿನಗಳ ಕಾಲ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗಿದೆ.
ಗಣೇಶೋತ್ಸವ ಆಚರಣೆ ವೇಳೆ ಕೋವಿಡ್-19ರ ಎಲ್ಲ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಿದ್ದರಾಮಯ್ಯಗೆ ಬ್ಲ್ಯಾಕ್‌ಮೇಲ್‌ ಮಾಡಲು ಸ್ಟಿಂಗ್ ಆಪರೇಷನ್.. ಇದ್ರಲ್ಲಿ ಕಾಂಗ್ರೆಸ್ಸಿನವರು ಇದ್ದಾರೆ: ಸಚಿವ ಯತೀಂದ್ರ

ನಿಮ್ಮ ಕಾಮೆಂಟ್ ಬರೆಯಿರಿ

advertisement