ಬೆಳಗಾವಿ : ಚನ್ನಮ್ಮನ ಕಿತ್ತೂರಿನ ಕೆಇಬಿ ಆವರಣದಲ್ಲಿ ವಿದ್ಯುತ್ ಪ್ರವಹಿಸಿದ ಪರಿಣಾಮ ಕಂಬದ ಮೇಲೆಯೇ ಲೈನ್ ಮ್ಯಾನ್ ಮೃತಪಟ್ಟ ದಾರುಣ ಘಟನೆ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ.
ಮೃತನನ್ನು ಹುಲಿಕಟ್ಟಿ ಗ್ರಾಮದ ಪ್ರೇಮಾನಂದ ಎಮ್ಮಿ(25) ಎಂದು ಗುರುತಿಸಲಾಗಿದೆ. ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸದೆ ಕಂಬ ಹತ್ತಿಸಿದ್ದಕ್ಕೆ ಪ್ರೇಮಾನಂದ ಅವರ ಕುಟುಂಬಸ್ಥರು ಹೆಸ್ಕಾಂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶವವನ್ನು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ