ರಾಜ್ಯದಲ್ಲಿ ಮುಂಗಾರು ಚುರುಕು : ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕುಗೊಂಡಿದ್ದು ಬೆಂಗಳೂರಿನಲ್ಲಿ ಮಂಗಳವಾರ ತುಂತುರು ಮಳೆ (Rain) ಶುರುವಾಗಿದೆ.
ಕರಾವಳಿ, ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ (ಜೂನ್‌ 20) ಎರಡ್ಮೂರು ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ತುಮಕೂರು, ಹಾಸನ, ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಬೀದರ್, ಧಾರವಾಡ, ಗದಗ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

 

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಅಂಜಲಿ ಹತ್ಯೆ ಪ್ರಕರಣ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ

ನಿಮ್ಮ ಕಾಮೆಂಟ್ ಬರೆಯಿರಿ

advertisement