ಮಾಜಿ ಪ್ರಧಾನಿ ದೇವೇಗೌಡರ ಭೇಟಿಯಾದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದರು.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ ಬೊಮ್ಮಾಯಿ, ಮಾಜಿ ಪ್ರಧಾನಿ ಆಶೀರ್ವಾದ ಪಡೆದರು. ಈ ವೇಳೆ ದೇವೇಗೌಡರು ನೂತನ ಮುಖ್ಯಮಂತ್ರಿಗೆ ಶಾಲು ಹೊದಿಸಿ ಸನ್ಮಾನಿಸದರು.
ಬೊಮ್ಮಾಯಿ ಅವರಿಗೆ ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಹೆಚ್.ಡಿ.ರೇವಣ್ಣ ಸಾಥ್ ನೀಡಿದರು. ದೇವೇಗೌಡರ ಭೇಟಿ ಬಳಿಕ ಮಾತನಾಡಿದ ಬೊಮ್ಮಾಯಿ, ಜನತಾಪರಿವಾರದಲ್ಲಿದ್ದಾಗಿನ ಒಡನಾಟ, ಹಳೆ ನೆನಪುಗಳನ್ನು ಮೆಲುಕು ಹಾಕಿದೆವು. ಸಿಕ್ಕಿರುವ ಅವಕಾಶ ಸಮರ್ಥವಾಗಿ ಬಳಸಿಕೊಂಡು, ರಾಜ್ಯಕ್ಕೆ ಉತ್ತಮವಾಗಿ ಆಡಳಿತ ನೀಡುವಂತೆ ಮಾರ್ಗದರ್ಶನ ನೀಡಿದರು ಎಂದು ಹೇಳಿದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ...| ಬೆಂಗಳೂರು : ತಡೆಗೋಡೆಗೆ ಟೆಂಪೋ ಡಿಕ್ಕಿ ; ವಾಹನವೇ ಅರ್ಧಕ್ಕೆ ತುಂಡು. ; ಸೇತುವೆಯಿಂದ ಕೆಳಕ್ಕೆ ಬಿದ್ದ ಕ್ಯಾಬಿನ್...!

ನಿಮ್ಮ ಕಾಮೆಂಟ್ ಬರೆಯಿರಿ

advertisement