ಮಹೇಶ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು

ಮಂಗಳೂರು: ಮಹೇಶ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡದಿಂದ 1 ವರ್ಷ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ. ತಿಮರೋಡಿ ವಿರುದ್ಧ ವಿವಿಧೆಡೆ 32 ಪ್ರಕರಣಗಳು ದಾಖಲಾಗಿದ್ದು, ಹೀಗಾಗಿ ಅವರನ್ನು ಒಂದು ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಸಹಾಯಕ ಆಯುಕ್ತರಾದ ಸ್ಟೆಲ್ಲಾ ವರ್ಗೀಸ್‌ ಆದೇಶಿಸಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಹಲವಾರು ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಅವರನ್ನು ದಕ್ಷಿಣ ಕನ್ನಡದಿಂದ  1 ವರ್ಷ ಗಡಿಪಾರು ಮಾಡಲಾಗಿದೆ. ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಮಹೇಶ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಗಡೀಪಾರು ಮಾಡಿ ಆದೇಶ ಮಾಡಲಾಗಿದೆ ಎನ್ನಲಾಗಿದೆ. ಪುತ್ತೂರು ಸಹಾಯಕ ಆಯುಕ್ತರ ಆದೇಶ ಪ್ರತಿ, ಬಂಟ್ವಾಳ ಉಪವಿಭಾಗದ ಡಿವೈಎಸ್‌ಪಿಗೆ ಬಂದ ಬಳಿಕ ಗಡಿಪಾರು ಪ್ರಕ್ರಿಯೆ ಚಾಲನೆ ಪಡೆದುಕೊಳ್ಳಲಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement