ಸುಖವಿಂದರ್ ಸಿಂಗ್ ಸುಖು ಹಿಮಾಚಲ ಪ್ರದೇಶದ ಮುಂದಿನ ಮುಖ್ಯಮಂತ್ರಿ

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯಸ್ಥರಾಗಿರುವ ಸುಖವಿಂದರ್ ಸಿಂಗ್ ಸುಖು ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷ ಶನಿವಾರ ಪ್ರಕಟಿಸಿದೆ.
ಹಿಂದಿನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಅವರು ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯ ನಂತರ ಪಕ್ಷ ತಿಳಿಸಿದೆ.
ಹಮೀರ್‌ಪುರ ಜಿಲ್ಲೆಯ ನಾದೌನ್‌ನ 58 ವರ್ಷದ ಶಾಸಕ ಸುಖು ಅವರು ಸಿಎಲ್‌ಪಿ ನಾಯಕರಾಗಿ ಆಯ್ಕೆಯಾಗಿದ್ದು, ಭಾನುವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷ ತಿಳಿಸಿದೆ.

68 ವಿಧಾನಸಭಾ ಸ್ಥಾನಗಳ ಪೈಕಿ 40 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್‌ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಂಡಿತು. ನವೆಂಬರ್ 12 ರಂದು ಮತದಾನ ನಡೆದಿದ್ದು, ಗುರುವಾರ ಫಲಿತಾಂಶ ಪ್ರಕಟವಾಗಿದೆ.
ಹಿಮಾಚಲ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರಾದ ಸುಖು ಅವರು ನಾಲ್ಕು ಅವಧಿಯ ಶಾಸಕರಾಗಿದ್ದು, ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಆಪ್ತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಮೂಲಗಳ ಪ್ರಕಾರ ಅವರು ಕಾಂಗ್ರೆಸ್ ಹಿರಿಯ ನಾಯಕರಾಗಿದ್ದ ಮತ್ತು ಆರು ಬಾರಿ ಮುಖ್ಯಮಂತ್ರಿಯಾಗಿದ್ದ ವೀರಭದ್ರ ಸಿಂಗ್ ಅವರ ವಿರೋಧಿ ಎಂದು ಕರೆಯಲ್ಪಡುತ್ತಿದ್ದರು.
ರಾಜ್ಯ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ವೀರಭದ್ರ ಸಿಂಗ್ ಅವರ ಪತ್ನಿಪ್ರತಿಭಾ ಸಿಂಗ್ ಮತ್ತು ಮುಖೇಶ್ ಅಗ್ನಿಹೋತ್ರಿ ಸೇರಿದಂತೆ ಹಲವಾರು ನಾಯಕರು ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿದ್ದರು.

ಪ್ರಮುಖ ಸುದ್ದಿ :-   ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿಯನ್ನು ಹೊರಹಾಕಿದ ಭಾರತ; 24 ಗಂಟೆಯೊಳಗೆ ದೇಶ ತೊರೆಯಲು ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement