ಕೊಡಗು: ಇಬ್ಬರನ್ನು ಕೊಂದಿದ್ದ ನರಭಕ್ಷಕ ಹುಲಿಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

  ಕೊಡಗು: 24 ತಾಸಿನೊಳಗೆ ಇಬ್ಬರನ್ನು ಕೊಂದಿದ್ದ ನರ ಭಕ್ಷಕ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಇಂದು, ಮಂಗಳವಾರ (ಫೆ.14) ಪೊನ್ನಂಪೇಟೆ ತಾಲೂಕಿನ ನಾಣಚ್ಚಿಗೇಟ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.
ಕೆಲವು ದಿನಗಳಿಂದ ಕೊಡಗಿನಲ್ಲಿ ಜನರು ನರಭಕ್ಷಕ ಹುಲಿಯ ಭಯದಲ್ಲಿ ಜನರು ಓಡಾಡುತ್ತಿದ್ದರು. ಇದೀಗ ಆ ಹುಲಿ ಸೆರೆಯಾಗಿದ್ದು ಎಲ್ಲರೂ ನಿಟ್ಟುಸಿರು ಬಿಡುವಂತಾಗಿದೆ. ಇಂದು ಬೆಳಗ್ಗೆಯಿಂದ ಹುಲಿ ಸೆರೆ ಕಾರ್ಯಾಚರಣೆ ತೀವ್ರಗೊಂಡಿತ್ತು. ಅದಕ್ಕಾಗಿ ಅರಣ್ಯ ಇಲಾಖೆಯವರು ಮೂರು ಆನೆಗಳನ್ನು ಬಳಸಿದ್ದಾರೆ. ನಂತರ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಬಳಿ ಸುಮಾರು 10 ವರ್ಷ ಪ್ರಾಯದ ಹೆಣ್ಣು ಹುಲಿ ಸೆರೆಯಾಗಿದೆ.
ಈ ಹುಲಿಯನ್ನು ಸೆರೆ ಹಿಡಿಯಲಾಗಿದ್ದು ಮೈಸೂರಿನ ಕೂರ್ಗಳ್ಳಿಗೆ ರವಾನೆ ಮಾಡಲಾಗುತ್ತಿದೆ.
ಫೆಬ್ರವರಿ 12ರಂದು ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ 18 ವರ್ಷದ ಚೇತನ್ ಮೇಲೆ ದಾಳಿ ನಡೆಸಿ ಕೊಂದು ಹಾಕಿತ್ತು ಈ ಘಟನೆ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಬಳಿ ನಡೆದ ಹುಲಿ ದಾಳಿಯಲ್ಲಿ ಮೈಸೂರು ಜಿಲ್ಲೆಯ ಕೊಳವಿಗೆ ಹಾಡಿ ನಿವಾಸಿ ರಾಜು (75) ಎಂಬವರು ಮೃತಪಟ್ಟಿದ್ದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ : ಗೃಹ ಸಚಿವ ಡಾ..ಪರಮೇಶ್ವರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement