ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ; ವರದಿ

ನವದೆಹಲಿ: ಚುನಾವಣೆ (Election) ಪ್ರಕ್ರಿಯೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿ ದೇಶಾದ್ಯಂತ ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಲು ನಿರ್ಣಯಿಸಿರುವ “ಒಂದು ರಾಷ್ಟ್ರ ಒಂದು ಚುನಾವಣೆ” (One Nation One Election) ಮಸೂದೆಗೆ ಇಂದು ಗುರುವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಸೂದೆಗಳನ್ನು ಅಂಗೀಕರಿಸಲಾಯಿತು.
ಹೀಗಾಗಿ ಪ್ರಸ್ತುತ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೇ ಈ ಮಸೂದೆ ಮಂಡಣೆಯಾಗುವ ಸಾಧ್ಯತೆ ದಟ್ಟವಾಗಿದೆ. ಲೋಕಸಭೆ (loksabha), ರಾಜ್ಯ ವಿಧಾನಸಭೆ (vidhana sabha), ಸ್ಥಳೀಯ ಸಂಸ್ಥೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಉದ್ದೇಶದಿಂದ ಈ ಮಸೂದೆ ಜಾರಿಗೆ ಕೇಂದ್ರ ನಿರ್ಧರಿಸಿದೆ.
ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಬಿಜೆಪಿ ನೀಡಿದ ಪ್ರಮುಖ ಭರವಸೆಗಳಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವುದು ಕೂಡ ಒಂದಾಗಿದೆ. ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಿದ ವಾರಗಳ ನಂತರ ಈ ಬೆಳವಣಿಗೆ ನಡೆದಿದೆ. ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಹಂತಹಂತವಾಗಿ ಏಕಕಾಲಕ್ಕೆ ಚುನಾವಣೆ ನಡೆಸುವಂತೆ ಸಮಿತಿ ಸೂಚಿಸಿದೆ.

ಪ್ರಮುಖ ಸುದ್ದಿ :-   ಕುಟುಂಬದಲ್ಲಿ ದುರಂತ ; ಪಾಪ ಪ್ರಜ್ಞೆಯಿಂದ ನರಳಿ ಪೊಲೀಸ್‌ ಠಾಣೆಗೆ ಬಂದು 39 ವರ್ಷಗಳ ಹಿಂದೆ ಕೊಲೆ ಮಾಡಿದ್ದನ್ನು ಒಪ್ಪಿಕೊಂಡ ವ್ಯಕ್ತಿ....!

ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದ ಸಮಿತಿಯು ತನ್ನ 18,626 ಪುಟಗಳ ವರದಿಯಲ್ಲಿ ಇದನ್ನು ಎರಡು ಹಂತಗಳಲ್ಲಿ ಜಾರಿಗೆ ತರಲು ಸೂಚಿಸಿದೆ. ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವಂತೆ ಸೂಚಿಸಿದೆ.
ಮುಂದಿನ ಹಂತವು ಲೋಕಸಭೆ ಮತ್ತು ರಾಜ್ಯಗಳ ಚುನಾವಣೆಗಳೊಂದಿಗೆ ಸ್ಥಳೀಯ ಸಂಸ್ಥೆಗಳು ಮತ್ತು ಪುರಸಭೆಗಳಿಗೆ ಚುನಾವಣೆಗಳನ್ನು ಸಿಂಕ್ರೊನೈಸ್ ಮಾಡುವುದನ್ನು ಒಳಗೊಂಡಿರುತ್ತದೆ. ಲೋಕಸಭೆ ಚುನಾವಣೆ ಮುಗಿದ 100 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ರೀತಿಯಲ್ಲಿ ಇದನ್ನು ಮಾಡಲಾಗುತ್ತದೆ. ಆದಾಗ್ಯೂ, ಇದಕ್ಕೆ ರಾಜ್ಯಗಳ ಅರ್ಧಕ್ಕಿಂತ ಹೆಚ್ಚು ರಾಜ್ಯಗಳ ಅನುಮೋದನೆಯ ಅಗತ್ಯವಿರುತ್ತದೆ. ಒಂದು ರಾಷ್ಟ್ರ ಒಂದು ಚುನಾವಣೆಗೆ 18 ಸಾಂವಿಧಾನಿಕ ತಿದ್ದುಪಡಿಗಳನ್ನು ಸಮಿತಿಯು ಶಿಫಾರಸು ಮಾಡಿದೆ.

ಆದಾಗ್ಯೂ, ಇದಕ್ಕೆ ಕಾಂಗ್ರೆಸ್ ಮತ್ತು ಎಎಪಿಯಂತಹ ಹಲವಾರು ಇಂಡಿಯಾ ಮೈತ್ರಿಕೂಟದ ಪಕ್ಷಗಳಿಂದ ವಿರೋಧ ವ್ಯಕ್ತಪಡಿಸಿವೆ. ಇದು ಕೇಂದ್ರದಲ್ಲಿ ಆಡಳಿತಾರೂಢ ಪಕ್ಷಕ್ಕೆ ಲಾಭವಾಗಲಿದೆ ಎಂದು ಆರೋಪಿಸಿದೆ. ನಿತೀಶಕುಮಾರ ಅವರ ಜೆಡಿಯು ಮತ್ತು ಚಿರಾಗ್ ಪಾಸ್ವಾನ್‌ನಂತಹ ಪ್ರಮುಖ ಎನ್‌ಡಿಎ ಮಿತ್ರಪಕ್ಷಗಳು ಏಕಕಾಲದ ಚುನಾವಣೆಯನ್ನು ಬೆಂಬಲಿಸಿವೆ.
“ಒಂದು ರಾಷ್ಟ್ರ ಒಂದು ಚುನಾವಣೆ” ಪ್ರಸ್ತಾವನೆಯನ್ನು ಜಾರಿಗೊಳಿಸಲು ಸಂಸತ್ತು ಎರಡು ಸಂವಿಧಾನ ತಿದ್ದುಪಡಿ ಮಸೂದೆಗಳನ್ನು ಅಂಗೀಕರಿಸಬೇಕಿದೆ. ಇದಕ್ಕೆ ವಿವಿಧ ರಾಜಕೀಯ ಪಕ್ಷಗಳ ವ್ಯಾಪಕ ಬೆಂಬಲ ಬೇಕಾಗುತ್ತದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಏಕಕಾಲದ ಚುನಾವಣೆ ಪ್ರಾಯೋಗಿಕವಲ್ಲ. ಚುನಾವಣೆ ಸಮೀಪಿಸುತ್ತಿರುವಾಗ ನೈಜ ಸಮಸ್ಯೆಗಳಿಂದ ಗಮನ ಬೇರೆಡೆ ಸೆಳೆಯಲು ಆಡಳಿತಾರೂಢ ಭಾರತೀಯ ಜನತಾ ಪಕ್ಷ ಇಂತಹ ವಿಷಯಗಳನ್ನು ಮುಂದಿಡುತ್ತಿದೆ ಎಂದು ಆರೋಪಿಸಿದ್ದಾರೆ.
ಎಲ್ಲಾ ರಾಜ್ಯಗಳಲ್ಲಿ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವುದು ಸುಲಭವಲ್ಲ. ಇದಕ್ಕಾಗಿ ಕೆಲವು ಕಡೆಗಳಲ್ಲಿ ಚುನಾವಣೆಯನ್ನು ಮೊದಲು, ಇನ್ನು ಕೆಲವು ಕಡೆಗಳಲ್ಲಿ ವಿಳಂಬವಾಗಿ ಮಾಡಿ ಚುನಾವಣೆ ನಡೆಸಬೇಕಾಗುತ್ತದೆ.

ಪ್ರಮುಖ ಸುದ್ದಿ :-   ಪರೀಕ್ಷೆಯಲ್ಲಿ ಫೇಲ್‌ ಆದ್ರೂ 2 ವರ್ಷ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದ ಮಹಿಳೆ..! ಸಬ್-ಇನ್ಸ್‌ಪೆಕ್ಟರ್ ಆಗಿ‌ ಪೋಸ್‌...!!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement