ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರ ಗೌಡ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲನೇ ಆರೋಪಿ ಪವಿತ್ರ ಗೌಡ, ಎರಡನೇ ಆರೋಪಿ ನಟ ದರ್ಶನ್‌ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನವನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ ಜುಲೈ 18ರ ವರೆಗೆ ವಿಸ್ತರಿಸಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಮತ್ತು ತುಮಕೂರಿನ ಜಿಲ್ಲಾ ಕಾರಾಗೃಹದಲ್ಲಿರುವ ಆರೋಪಿಗಳನ್ನು 24ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ವಿಶ್ವನಾಥ್‌ ಸಿ. ಗೌಡರ ಅವರ ಮುಂದೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರುಪಡಿಸಲಾಯಿತು.
“ಆರೋಪಿಗಳಿಂದ ಈವರೆಗೆ 83.65 ಲಕ್ಷ ರೂಪಾಯಿ ವಶ ಪಡಿಸಿಕೊಂಡಿದ್ದು, ಹಣದ ಮೂಲದ ಬಗ್ಗೆ ತನಿಖೆ ಮಾಡಬೇಕಿದೆ. ಕೆಲ ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಿದೆ. ಮೊಬೈಲ್‌ಗಳಿಗೆ ಸಂಬಂಧಿಸಿದಂತೆ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ವರದಿ ಪಡೆಯಬೇಕಿದೆ. ಆರೋಪಿಗಳು ಬೇರೆ ಬೇರೆ ವ್ಯಕ್ತಿಗಳ ಹೆಸರಿನಲ್ಲಿ ಖರೀದಿ ಮಾಡಿರುವ ಸಿಮ್ ಬಗ್ಗೆ ಪರಿಶೀಲನೆ ಮಾಡಬೇಕಿದೆ. ಪ್ರತ್ಯಕ್ಷ ಮತ್ತು ಪರೋಕ್ಷ ಸಾಕ್ಷಿಗಳ ಹೇಳಿಕೆಯನ್ನು ಸಿಆರ್‌ಪಿಸಿ ಸೆಕ್ಷನ್‌ 164 ಅಡಿ ದಾಖಲಿಸಬೇಕಿದೆ. ಹೀಗಾಗಿ, ಜಾಮೀನು ಮಂಜೂರಾತಿ ಮನವಿಯನ್ನು ಪರಿಗಣಿಸಬಾರದು” ಎಂದು ರಿಮ್ಯಾಂಡ್‌ ಅರ್ಜಿಯಲ್ಲಿ ಕೋರಲಾಗಿದೆ. ಮಾಹಿತಿ ಪಡೆದುಕೊಂಡ ಮ್ಯಾಜಿಸ್ಟ್ರೇಟ್‌ ಅವರು ಎಲ್ಲಆರೋಪಿಗಳನ್ನು ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದರು.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement