ಕರ್ನಾಟಕದಲ್ಲಿ ಶನಿವಾರ 1987 ಕೊರೊನಾ ಸೋಂಕು ಪತ್ತೆ

ಬೆಂಗಳೂರು: ಕೊರೊನಾ ಮೂರನೇ ಅಲೆ ಭೀತಿಯ ನಡುವೆ ಕೇರಳ ಹಾಗೂ ತಮಿಳುನಾಡಿನಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಕರ್ನಾಟಕದಲ್ಲಿಯೂ ಶನಿವಾರ ( ಕಳೆದ 24 ಗಂಟೆಗಳಲ್ಲಿ) 1987 ಕೊರೊನಾ ಸೋಂಕು ಪತ್ತೆಯಾಗಿದ್ದು, 1632 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೇ ಸಮಯದಲ್ಲಿ ಕೊರೊನಾ ಸೋಂಕಿನಿಂದಾಗಿ 37 ಜನ ಮೃತಪಟಟಿದ್ದಾರೆ.
ರಾಜ್ಯದಲ್ಲಿ ಈವರೆಗೆ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 29,05,124ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿನ ಪ್ರಕರಣಗಳ ಸಂಖ್ಯೆ- 36,562 ಆಗಿದೆ. ಇಲ್ಲಿಯವರೆಗೆ ಒಟ್ಟು 28,44,742 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದ ಪಾಸಿಟಿವಿಟಿ ದರ ಶೇ. 1.43ರಷ್ಟಿದ್ದು, ಕೋವಿಡ್ ಡೆತ್ ರೇಟ್ ಶೇ.1.86 ಇದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ವರದಿ ಮಾಡಿದೆ.
ಬೆಂಗಳೂರು ನಗರದಲ್ಲಿ ಕಳೆದ 24 ಗಂಟೆಗಳಲ್ಲಿ 450 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 12,27,339 ಏರಿದ್ದರೆ, ಸಕ್ರಿಯ ಪ್ರಕರಣಗಳು 8529 ಇವೆ.
ಕೇರಳ ಗಡಿ ಹಂಚಿಕೊಂಡಿರುವ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ 365 ಪ್ರಕರಣಗಳು, ಮೈಸೂರು ಜಿಲ್ಲೆಯಲ್ಲಿ 177 ಪ್ರಕರಣಗಳು, ಉಡುಪಿ ಜಿಲ್ಲೆಯಲ್ಲಿ 148 ಪ್ರಕರಣಗಳು, ತುಮಕೂರು ಜಿಲ್ಲೆಯಲ್ಲಿ 108 ಪ್ರಕರಣಗಳು, ಬೆಳಗಾವಿ 56, ಶಿವಮೊಗ್ಗ 40 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 44, ಚಿಕ್ಕಮಗಳೂರು 55, ಹಾಸನ 105, ಕೊಡಗು 132, ಕೋಲಾರ 51, ಮಂಡ್ಯ ಜಿಲ್ಲೆಯಲ್ಲಿ 47 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

31-07-2021 HMB Kannada

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement