ಭಾರತದಲ್ಲಿ ಪುನಃ ದೈನಂದಿನ ಕೊರೊನಾ ಚೇತರಿಕೆಗಿಂತ ಹೊಸ ಸೋಂಕಿತರೇ ಹೆಚ್ಚು..!

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 39,097 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,13,32,159ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 546 ಜನರು ಮಹಾಮಾರಿಗೆ ಮೃತಪಟ್ಟಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 4,20,016ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 4,08,977 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 35,087 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 3,05,03,166 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿ ಈವರೆಗೆ 42,78,82,261 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ಕಳೆದ 24ಗಂಟೆಯಲ್ಲಿ 42,67,799 ಜನರಿಗೆ ಲಸಿಕೆ ನೀಡಲಾಗಿದೆ., ದೇಶದಲ್ಲಿ ಈವರೆಗೆ 42,78,82,261 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

ನಿಮ್ಮ ಕಾಮೆಂಟ್ ಬರೆಯಿರಿ

advertisement