ಸಮಾಜಸೇವಕ, ರಂಗ ಕಲಾವಿದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಡುಪಿ: ಖ್ಯಾತ ಸಮಾಜಸೇವಕ ಹಾಗೂ ರಂಗ ಕಲಾವಿದ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ತಮ್ಮ ಮನೆಯ ಪಕ್ಕಾಸಿಗೆ ಸೀರೆ ಬಿಗಿದು ಅದರ ಎರಡು ತುದಿಗೆ ದಂಪತಿ ನೇಣು ಬಿಗಿದುಕೊಂಎಉ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಲೀಲಾಧರ ಶೆಟ್ಟಿ (68) ಹಾಗೂ ಪತ್ನಿ ವಸುಂಧರಾ (58) ಕೌಟುಂಬಿಕ ಕಾರಣಗಳಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಲೀಲಾಧರ ಶೆಟ್ಟಿ ಖ್ಯಾತ ಸಮಾಜ ಸೇವಕ ಹಾಗೂ ರಂಗ ಕಲಾವಿದರಾಗಿದ್ದರು. ಧಾರ್ಮಿಕ ಮತ್ತು ಸಾಮಾಜಿಕ ವ್ಯಕ್ತಿತ್ವದ ಮೂಲಕ ಗುರುತಿಸಿಕೊಂಡವರು. ಧರಣಿ ಸಮಾಜ ಸೇವಾ ಸಂಸ್ಥೆಯ ಅಧ್ಯಕ್ಷ, ಕಾಪು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ದಂಪತಿ ಮಂಗಳವಾರ ಮಧ್ಯರಾತ್ರಿ 11:20 ರಿಂದ 12:30 ರ ನಡುವಿನ‌ ಅವಧಿಯಲ್ಲಿ ತಮ್ಮ ಮನೆಯ ಪಕ್ಕಾಸಿಗೆ‌ ಒಂದೇ ಸೀರೆಯನ್ನು ಬಿಗಿದು, ಅದರ ಎರಡೂ ತುದಿಗೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಕಲಾ ಸಂಘಟಕ, ಕಲಾಪೋಷಕರಾಗಿದ್ದ ವಿವಿಧ ಕಾರ್ಯಕ್ರಮಗಳ ಆಯೋಜಕರಾಗಿ ಕಲೆ, ಸಂಸ್ಕೃತಿ, ಸಂಸ್ಕಾರ, ಧಾರ್ಮಿಕ, ಜನಪದ, ಶೈಕ್ಷಣಿಕ ಕ್ಷೇತ್ರಗಳ ಪೋಷಕರಾಗಿ ಲೀಲಾಧರ ಶೆಟ್ಟಿ ಗುರುತಿಸಲ್ಪಟ್ಟಿದ್ದರು. ಅವರ ಸೇವೆಗಾಗಿ ಎಲ್ಲರೂ ಅವರನ್ನು ಆತ್ಮೀಯವಾಗಿ ಲೀಲಣ್ಣ ಎಂದೇ ಕರೆಯುತ್ತಿದ್ದರು. ಸರಳ ಸಜ್ಜನ ವ್ಯಕ್ತಿತ್ವದ ಲೀಲಾಧರ ಶೆಟ್ಟಿ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೂ ಸ್ಪರ್ಧಿಸಿದ್ದರು.‌ ಅತ್ಯುತ್ತಮ ನಾಟಕ ತಂಡ ಹೊಂದಿದ್ದರು. ಅಲ್ಲದೆ, ಜಿಲ್ಲಾ ಕಬಡ್ಡಿ ಸಂಸ್ಥೆಯ ಉಪಾಧ್ಯಕ್ಷರಾಗಿದ್ದರು. ರಂಗಕರ್ಮಿಯು ಆಗಿ ಕಳೆದ ಹಲವಾರು ವರ್ಷಗಳಿಂದ “ರಂಗಿತರಂಗ” ನಾಟಕ ತಂಡವನ್ನು ಮುನ್ನಡೆಸಿ ನಾಟಕ ನಿರ್ದೇಶನ, ನಟರಾಗಿ ಕೂಡಾ ಜನಾನುರಾಯಿಯಾಗಿದ್ದರು.

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement