ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ಸೋಮವಾರ (ಜುಲೈ 15)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾರವಾರ ಅಂಕೋಲ, ಹೊನ್ನಾವರ, ಕುಮಟಾ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ಎಲ್ಲ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಸೋಮವಾರ (ಜುಲೈ 15 ರಂದು) ರಜೆ ನೀಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ