ಬೆಳಗಾವಿ : ರಮೇಶ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ದಾಳಿ

ಬೆಳಗಾವಿ : ಜಿಲ್ಲೆಯ ಗೋಕಾಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಅಪೆಕ್ಸ್ ಬ್ಯಾಂಕ್ ನಲ್ಲಿ ಸಾಲ ಪಡೆದು ಪರುಪಾವತಿ ಮಾಡದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದ ಬಳಿ ಇರುವ ಸೌಭಾಗ್ಯಲಕ್ಷ್ಮೀ ಶುಗರ್‌ ಲಿಮಿಟೆಡ್‌ ಕಾರ್ಖಾನೆ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಕಾರ್ಖಾನೆ ಸ್ಥಾಪಿಸಿಲು 439 ಕೋಟಿ ರೂಪಾಯಿಯನ್ನು ಅಪೆಕ್ಸ್ ಬ್ಯಾಂಕ್ ನಲ್ಲಿ ಸಾಲ ಪಡೆದುಕೊಂಡಿದ್ದರು. ಆದರೆ ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಜನವರಿ 5ರಂದು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್​ ಬ್ಯಾಂಕ್​ನಲ್ಲಿ ಸಾಲ (Loan) ಪಡೆದು ಪಾವತಿಸದೇ ಮೋಸ ಮಾಡುವ ಉದ್ದೇಶ ಹೊಂದಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ಬೆಂಗಳೂರಿನ ವಿವಿ ಪುರಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿದೆ. ಮಂಗಳವಾರ ಬೆಂಗಳೂರಿನಿಂದ ಬಂದ ಸಿಐಡಿ ಅಧಿಕಾರಿಗಳು, ಕಾರ್ಖಾನೆಯಲ್ಲಿ ಸಂಜೆಯವರೆಗೆ ಪರಿಶೀಲನೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement