ಕಲಬುರಗಿ: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ದರಾಮ ಸ್ವಾಮೀಜಿ ವಿಧಿವಶ

ಕಲಬುರಗಿ: ತೀವ್ರ ಹೃದಯಾಘಾತದಿಂದ ಕಲಬುರಗಿಯ ಕಾಳಗಿ ತಾಲೂಕಿನ ವಿರಕ್ತ ಮಠದ ಶ್ರೀ ಸಿದ್ದರಾಮ ಸ್ವಾಮೀಜಿ (35) ವಿಧಿವಶರಾಗಿದ್ದಾರೆ.
ಆದರಿಂದು ನಸುಕಿನ ಜಾವ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇಂದು, ಸೋಮವಾರ ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ ವಿಧಾನ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ.
ಸ್ವಾಮೀಜಿಗೆ ರಾತ್ರಿ ಮಲಗಿದ್ದಲ್ಲಿಯೇ ಹೃದಯಾಘಾತವಾಗಿದೆ ಎನ್ನಲಾಗಿದೆ. ಮಠದ ಸಿಬ್ಬಂದಿ ಬೆಳಿಗ್ಗೆ ಸ್ವಾಮೀಜಿ ನೋಡಿದಾಗ ಅವರು ಮೃತಪಟ್ಟಿದ್ದು ಗೊತ್ತಾಗಿದೆ.
ಶ್ರೀ ಸಿದ್ದರಾಮ ಮಹಾಸ್ವಾಮಿ ಭಾನುವಾರ ರಟಕಲ್ ಗ್ರಾಮದಲ್ಲಿ ಭಾನುವಾರ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಸಚಿವ ಡಾ. ಶರಣಪ್ರಕಾಶ
ಪಾಟೀಲ್, ಶಾಸಕ ಬಿಆರ್ ಪಾಟೀಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ ನೇಮಕ

ನಿಮ್ಮ ಕಾಮೆಂಟ್ ಬರೆಯಿರಿ

advertisement