ಸಂಗೀತ ನಿರ್ದೇಶಕ ಹಂಸಲೇಖ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ರಾಜಾಜಿ ನಗರ ಫಸ್ಟ್ ಬ್ಲಾಕ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಹಂಸಲೇಖ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ಮಾಹಿತಿಯ ಪ್ರಕಾರ ಹಂಸಲೇಖ ಅವರು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಹಾಗಾಗಿಚಿಕಿತ್ಸೆಯ ನಂತರ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬಹುಶಃ ಸಂಜೆ ನಂತರ ಅಥವಾ ನಾಳೆ ಬೆಳಿಗ್ಗೆ ಹಂಸಲೇಖ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಬಹುದು ಎನ್ನಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement