ಉತ್ತರ ಪ್ರದೇಶದಲ್ಲಿ 53,942 ಧ್ವನಿವರ್ಧಕಗಳನ್ನು ತೆಗೆದುಹಾಕಿದ ಯೋಗಿ ಸರ್ಕಾರ

ಲಕ್ನೋ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರದ ನಿರ್ದೇಶನದ ಮೇರೆಗೆ ಭಾನುವಾರ ಬೆಳಿಗ್ಗೆ 7.00 ಗಂಟೆ ವರೆಗೆ ರಾಜ್ಯದ ವಿವಿಧ ಧಾರ್ಮಿಕ ಸ್ಥಳಗಳಿಂದ 53,942 ಧ್ವನಿವರ್ಧಕಗಳನ್ನು ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಮಾಹಿತಿ ನೀಡಿದ್ದಾರೆ.
ಉತ್ತರ ಪ್ರದೇಶದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಮಾತನಾಡಿ, “ಇಂದು ಬೆಳಿಗ್ಗೆ 7 ರ ವರೆಗೆ, ರಾಜ್ಯದ ವಿವಿಧ ಧಾರ್ಮಿಕ ಸ್ಥಳಗಳಿಂದ 53,942 ಧ್ವನಿವರ್ಧಕಗಳನ್ನು ತೆಗೆದುಹಾಕಲಾಗಿದೆ ಮತ್ತು 60,295 ಧ್ವನಿವರ್ಧಕಗಳ ಧ್ವನಿ ಮಟ್ಟವನ್ನು ಪ್ರಮಾಣಿತ ನಿಯತಾಂಕಗಳ ಮಟ್ಟಕ್ಕೆ ತಗ್ಗಿಸಲಾಗಿದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 24 ರಂದು ರಾಜ್ಯದ ಧಾರ್ಮಿಕ ಸ್ಥಳಗಳಿಂದ ಅಕ್ರಮ ಧ್ವನಿವರ್ಧಕಗಳನ್ನು ತೆಗೆದುಹಾಕಲು ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಅನುಪಾಲನಾ ವರದಿಯನ್ನು (ಜಿಲ್ಲೆಗಳಿಂದ) ಕೋರಲಾಗಿದೆ. ಧಾರ್ಮಿಕ ಮುಖಂಡರೊಂದಿಗೆ ಮಾತನಾಡಿ, ಅವರೊಂದಿಗೆ ಸಮನ್ವಯ ಸಾಧಿಸುವ ಮೂಲಕ ಅನಧಿಕೃತ ಧ್ವನಿವರ್ಧಕಗಳನ್ನು ತೆಗೆದುಹಾಕುವುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಅವನೀಶ್ ಕುಮಾರ್ ಅವಸ್ತಿ ಹೇಳಿದರು.

ಪ್ರಮುಖ ಸುದ್ದಿ :-   ಏಪ್ರಿಲ್‌ ತಿಂಗಳಲ್ಲಿ ದಾಖಲೆಯ ಪ್ರಮಾಣದ ಜಿಎಸ್‌ಟಿ ಸಂಗ್ರಹ ; ಕರ್ನಾಟಕಕ್ಕೆ 2ನೇ ಸ್ಥಾನ

ಈ ಘೋಷಣೆಗೂ ಮುನ್ನ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಶಬ್ದವನ್ನು ನಿರ್ಬಂಧಿಸಲು ಈ ತಿಂಗಳ ಆರಂಭದಲ್ಲಿ ನಿರ್ದೇಶನಗಳನ್ನು ನೀಡಿದ್ದರು.
ಏಪ್ರಿಲ್ 13 ರಂದು, ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಮಹಾರಾಷ್ಟ್ರ ಸರ್ಕಾರಕ್ಕೆ ಗಡುವು ನೀಡಿದರು ಮತ್ತು ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಬೇಕು ಎಂದು ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದರು. ಮೇ 3ರೊಳಗೆ ಸರ್ಕಾರ ಕ್ರಮಕೈಗೊಳ್ಳಬೇಕು, ವಿಫಲವಾದರೆ ಸರ್ಕಾರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು. ಮಸೀದಿಗಳಲ್ಲಿ ಆಜಾನ್ ಬದಲಿಗೆ ನಾವು ಮಸೀದಿ ಮುಂದೆ ಹನುಮಾನ್ ಚಾಲೀಸಾ ನುಡಿಸುತ್ತೇವೆ ಎಂದು ಹೇಳುವ ಮೂಲಕ ಹಲವಾರು ಮುಖಂಡರು ಎಂಎನ್‌ಎಸ್ ಮುಖ್ಯಸ್ಥರನ್ನು ಬೆಂಬಲಿಸಿದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement