ಕೊಲ್ಹಾರ : ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಮಂದಿ ನೀರುಪಾಲು

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಜನ ನೀರು ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿ ಮಂಗಳವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ.
ಆರು ಮಂದಿ ತೆಪ್ಪದಲ್ಲಿ ನದಿ ಪಕ್ಕದ ನಡುಗಡ್ಡೆಗೆ ಹೋಗುತ್ತಿದ್ದಾಗ ಏಕಾಏಕಿ ತೆಪ್ಪ ಮಗುಚಿ ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ಅದರಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದ್ದು, ಉಳಿದ 5 ಮಂದಿ ಮೃತದೇಹ ಹುಡುಕಾಟ ನಡೆದಿದೆ.
ಈ ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಗಳೆಲ್ಲ ಜೂಜುಕೋರರು ಎಂದು ಹೇಳಲಾಗುತ್ತಿದೆ. 8-10 ಜನರು ಬಳೂತಿ ಜಾಕ್‌ವೆಲ್ ಬಳಿ ಕೃಷ್ಣ ನದಿ ತಟದಲ್ಲಿ ಗುಂಪೊಂದು ಇಸ್ಪೀಟ್ ಆಡುತ್ತಿದ್ದರು. ಇದರ ಮಾಹಿತಿ ಪೊಲೀಸರಿಗೆ ಸಿಕ್ಕಿದ್ದು, ಅವರು ಬರುತ್ತಾರೆಂದು ಸ್ಥಳೀಯರು ಇವರಿಗೆ ಮಾಹಿತಿ ನೀಡಿದ್ದು, ಇದು ಗೊತ್ತಾದ ಬೆನ್ನಲೇ ತೆಪ್ಪದ ಮೂಲಕ ತಪ್ಪಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಆದರೆ ಜೋರಾದ ಗಾಳಿಗೆ ತೆಪ್ಪ ನದಿಯಲ್ಲಿ ಮುಗುಚಿ ಬಿದ್ದಿದೆ. ಪರಿಣಾಮ ಆರು ಜನರು ನೀರು ಪಾಲಾಗಿದ್ದಾರೆ. ಇನ್ನಿಬ್ಬರು ಈಜಿಕೊಂಡು ಹೋಗಿ ದಡ ಸೇರಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಕೊಲ್ಹಾರ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಮೃತದೇಹಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಓರ್ವನ ಮೃತದೇಹ ಹೊರತೆಗೆದಿದ್ದು, ಇನ್ನುಳಿದವರ ಮೃದೇಹಗಳಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಎಸ್ಪಿ ಋಷಿಕೇಶ ಸೋನೆವಣೆ, ಎಎಸ್ಪಿ ಶಂಕರ ಮಾರಿಹಾರ ಪರಿಶೀಲನೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement