ನೈಜೀರಿಯಾದ ಮೂಲದ ಡ್ರಗ್ ಪೆಡ್ಲರ್ ಬಂಧನ : 1 ಕೋಟಿ ಮೌಲ್ಯದ ಮಾದಕ ವಸ್ತುಗಳ ವಶ

ಬೆಂಗಳೂರು: ಕೋಲ್ಗೇಟ್ ಟೂತ್‍ಪೇಸ್ಟ್ ಬಾಕ್ಸ್‌ಗಳಲ್ಲಿ ಡ್ರಗ್ಸ್‌ ತುಂಬಿಕೊಂಡು ಬಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿ ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್ ಮತ್ತು ಎಕ್ಸ್‍ಟೆಸಿ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ.
ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮನಹಳ್ಳಿ, ಸೆಂಟ್ ಥಾಮಸ್ ಟೌನ್‍ನ 3ನೇ ಕ್ರಾಸಿನ ಕಾನ್ವೆಂಟ್ ಅಡ್ಡ ರಸ್ತೆಯಲ್ಲಿರುವ ಮನೆಯಲ್ಲಿ ವಾಸವಾಗಿದ್ದ ಡ್ರಗ್ಸ್ ಪೆಡ್ಲರ್ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿ ಆತನನ್ನು ಬಂಧಿಸಿ ಆತನ ಬಳಿ ಇದ್ದ ಸುಮಾರು ಒಂದು ಕೋಟಿ ಬೆಲೆ ಬಾಳುವ 500 ಗ್ರಾಂ. ಎಂಡಿಎಂಎ ಕ್ರಿಸ್ಟೆಲ್, 400 ಎಂಡಿಎಂಎ – ಎಕ್ಸ್‍ಟೆಸಿ ಮಾತ್ರೆಗಳು, ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯು ಟೂರಿಸ್ಟ್‌ ವೀಸಾದ ಅಡಿ ಭಾರತಕ್ಕೆ ಬಂದು ಮಾದಕ ವಸ್ತುಗಳ ಮಾರಾಟ ಜಾಲದಲ್ಲಿ ಸಕ್ರಿಯವಾಗಿ ತೊಡಗಿದ್ದ. ಆರೋಪಿಯು ನೈಜೀರಿಯಾ ಮೂಲದ ತನ್ನ ಸ್ನೇಹಿತನೊಂದಿಗೆ ಮುಂಬೈನಲ್ಲಿ ವಾಸವಾಗಿದ್ದುಕೊಂಡು ಮಾದಕ ವಸ್ತುಗಳನ್ನು ಖರೀದಿಸಿ ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳಿಗೆ ಮಾರಾಟ ಮಾಡುವ ಉದ್ದೇಶ ಹೊಂದಿದ್ದ.
ಮಾದಕ ವಸ್ತುಗಳಾದ ಎಂಡಿಎಂಎ ಕ್ರಿಸ್ಟಲ್ ಎಕ್ಸ್‍ಟೆಸಿ ಮಾತ್ರೆಗಳನ್ನು ಕೋಲ್ಗೇಟ್ ಜೆಲ್+ಕ್ರೀಮ್ ಮತ್ತಿತರ ಬಾಕ್ಸುಗಳಲ್ಲಿ ಹಾಕಿಕೊಂಡು ಬೆಂಗಳೂರಿಗೆ ಬಂದು ಮನೆ ಮಾಡಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದನೆಂದು ತನಿಖೆ ವೇಳೆ ಆತ ಬಾಯಿಬಿಟ್ಟಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ. ಆರೋಪಿಗಳ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎನ್‍ಡಿಪಿಎಸ್ ಕಾಯ್ದೆ 1985 ಹಾಗೂ ವಿದೇಶಿಯರ ಕಾಯ್ದೆ ರೀತಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ.

ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement