ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಕುಮಟಾದ ಡಾ.ಜಿ.ಎಲ್. ಹೆಗಡೆ ನೇಮಕ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರನ್ನಾಗಿ ಉತ್ತರ ಕನ್ನಡ ಜಿಲ್ಲೆಯ  ಡಾ.ಜಿ.ಎಲ್.ಹೆಗಡೆ ಅವರನ್ನು ನೇಮಕ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ಎಂ.ಎ.ಹೆಗಡೆ ನಿಧನ ಹಿನ್ನೆಲೆಯಲ್ಲಿ ತೆರವಾಗಿತ್ತು.
ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆ ಹೊರಡಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿನ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರನ್ನಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ.ಜಿ.ಎಲ್.ಹೆಗಡೆ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಉತ್ತರ ಕನ್ನಡ ಕುಮಟಾದ ಡಾ.ಎ.ವಿ.ಬಾಳಿಗಾ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಡಾ.ಜಿ.ಎಲ್ ಹೆಗಡೆ, ಯಕ್ಷಗಾನ ವೇಷಧಾರಿಯಾಗಿ, ದಕ್ಷಿಣೋತ್ತರ ಕನ್ನಡದ ಪ್ರಸಿದ್ಧ ಯಕ್ಷಗಾನ ತಾಳಮದ್ದಳೆ ಅರ್ಥಧಾರಿಯಾಗಿ ಹೆಸರು ಪಡೆದಿರುವ ಯಕ್ಷಗಾನದ ಸಂಬಂಧಿಸಿದಂತೆ ಯಕ್ಷಗಾನ ವರ್ಣವೈಭವ, ಶೇಣಿ ರಾಮಾಯಣ, ಶೇಣಿ ಭಾರತ, ನಮ್ಮ ಚಿಟ್ಟಾಣಿ ಸೇರಿದಂತೆ ಹಲವು ಪುಸ್ತಕಗಳ ಲೇಖಕರಾಗಿರಾಗಿದ್ದಾರೆ. ಯಕ್ಷಗಾನ ಸಂಶೋಧನಾ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement