ಮಣಿಪಾಲ ಎಂಐಟಿಯಲ್ಲಿ  10 ದಿನದಲ್ಲಿ 770 ವಿದ್ಯಾರ್ಥಿಗಳಿಗೆ ಕೊರೊನಾ  

ಉಡುಪಿ: ಮಣಿಪಾಲದ ಎಂಐಟಿ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಸೋಂಕಿನಿಂದಾಗಿ ಉಡುಪಿ ಜಿಲ್ಲೆಯಲ್ಲಿ ಏಕದಿನದ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಶುಕ್ರವಾರ 210ಕ್ಕೆ ಏರಿಕೆಯಾಗಿದೆ.
ಶುಕ್ರವಾರ ಒಂದೇ ದಿನ ಎಂಐಟಿ 184 ವಿದ್ಯಾರ್ಥಿಗಳಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ. 10-12 ದಿನಗಳಲ್ಲಿ ಸುಮಾರು 770 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಎರಡುವಾರದ ಹಿಂದೆ ಎಂಐಟಿಯಲ್ಲಿ ಆಫ್’ಲೈನ್ ಎಂಜಿನಿಯರಿಂಗ್ ತರಗತಿಗಳನ್ನು ಆರಂಭವಾಗಿದ್ದವು. ಹೊರ ರಾಜ್ಯದ ವಿದ್ಯಾರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿರುವ ಕಾಲೇಜಿನಲ್ಲಿ 5,000ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಒಟ್ಟು 770 ಮಂದಿ ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ಕಾಲೇಜು ಕ್ಯಾಂಪಸನ್ನು ಸಂಪೂರ್ಣ ಕಂಟೈನ್ಮೆಂಟ್ ಝೋನ್ ಆಗಿ ಪರಿವರ್ತಿಸಿ ಸೀಲ್ಡೌನ್ ಮಾಡಲಾಗಿದೆ.

 

2.5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು

ನಿಮ್ಮ ಕಾಮೆಂಟ್ ಬರೆಯಿರಿ

advertisement