ಬೆಂಗಳೂರು: ರಾಜ್ಯದ ಇತಿಹಾಸದಲ್ಲಿಯೇ ವಿನೂತನವಾಗಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ (SSLC Result) ಇಂದು (ಸೋಮವಾರ) ಪ್ರಕಟವಾಗಿದೆ.
ಕಳೆದ ಮೂರು ವಾರಗಳ ಹಿಂದೆ ನಡೆದ ಸರಳ ಮಾದರಿಯ ಪರೀಕ್ಷೆ ಫಲಿತಾಂಶವನ್ನು ಇಂದು ನೂತನ ಶಿಕ್ಷಣ ಸಚಿವರಾಗಿರುವ ಬಿ.ಸಿ. ನಾಗೇಶ್ ಪ್ರಕಟಿಸಿದರು. ಕೋವಿಡ್ ಸವಾಲಿನ ಸಮಯದಲ್ಲಿ ಪರೀಕ್ಷೆ ಬರೆದ ಎಲ್ಲರನ್ನೂ ಪಾಸ್ ಮಾಡುವುದಾಗಿ ಮೊದಲೇ ಹೇಳಲಾಗಿತ್ತು. ಅದರಂತೆ, ಒಬ್ಬ ವಿದ್ಯಾರ್ಥಿಯನ್ನು ಹೊರತು ಪಡಿಸಿ ಎಲ್ಲರನ್ನೂ ಉತ್ತೀರ್ಣ ಮಾಡಲಾಗಿದೆ. ಶೇ. 99.9ಫಲಿತಾಂಶ ಬಂದಿದೆ. ತಾನು ಪರೀಕ್ಷೆ ಬರೆಯುವ ಬದಲು ಬೇರೆಯುವರು ಪರೀಕ್ಷೆ ಬರೆದ ಕಾರಣ ಒಬ್ಬ ವಿದ್ಯಾರ್ಥಿಯನ್ನು ಅನುತ್ತೀರ್ಣ ಮಾಡಲಾಗಿದೆ.
ಎ ಪ್ಲಸ್ ಗ್ರೇಡ್ನಲ್ಲಿ 1, 28, 931 ವಿದ್ಯಾರ್ಥಿಗಳು ಪಾಸಾಗಿದ್ದರೆ, ಎ ಗ್ರೇಡ್ನಲ್ಲಿ 2,50,317 ಲಕ್ಷ ಪಾಸಾಗಿದ್ದಾರೆ. ಬಿನಲ್ಲಿ 2,87,684 ಲಕ್ಷ ವಿದ್ಯಾರ್ಥಿಗಳು, ಸಿ ಗ್ರೇಡ್ನಲ್ಲಿ 1,13,610 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಶೇ.9ರಷ್ಟು ವಿದ್ಯಾರ್ಥಿಗಳು ಕೃಪಾಂಕ ಪಡೆದು ಪಾಸ್ ಆಗಿದ್ದಾರೆ, 13 ವಿದ್ಯಾರ್ಥಿಗಳಿಗೆ ವಿಷಯವೊಂದಕ್ಕೆ ಗರಿಷ್ಠ 28 ಕೃಪಾಂಕ ನೀಡಿ ಪಾಸ್ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
157 ಮಕ್ಕಳು 625 ಕ್ಕೆ 625 ಅಂಕ ಪಡೆದಿದ್ದಾರೆ, 289 ವಿದ್ಯಾರ್ಥಿಗಳು 625ಕ್ಕೆ 623 ಅಂಕ ಪಡೆದಿದ್ದರೆ, ಇಬ್ಬರಿಗೆ 622 ಅಂಕ ಸಿಕ್ಕಿದೆ. 621 ಅಂಕ 449 ವಿದ್ಯಾರ್ಥಿಗಳು ಅಂಕ ಪಡೆದಿದ್ದಾರೆ. 28 ವಿದ್ಯಾರ್ಥಿಗಳು 620 ಅಂಕ ಪಡೆದಿದ್ದಾರೆ.
ಪ್ರಥಮ ಭಾಷೆ ಕನ್ನಡದಲ್ಲಿ 25,702 ಮಕ್ಕಳು 125ಕ್ಕೆ 125ಕ್ಕೆ ಅಂಕ ಪಡೆದಿದ್ದಾರೆ.
ದ್ವಿತೀಯ 36,628 ವಿದ್ಯಾರ್ಥಿಗಳು, ತೃತೀಯ ಭಾಷೆ 36,776, ಗಣಿತ 6,321, ವಿಜ್ಞಾನ 3,649, ಸಮಾಜ ವಿಜ್ಞಾನ 9,367 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಪಡೆದಿದ್ದಾರೆ. ಸಂಜೆಯೊಳಗೆ ಪ್ರತಿ ವಿದ್ಯಾರ್ಥಿ ಅವರ ಮೊಬೈಲ್ ನಂಬರ್ಗೆ ಫಲಿತಾಂಶ ಬರಲಿದೆ ಎಂದು ಸಚಿವರು ತಿಳಿಸಿದರು.
ಕೋವಿಡ್ ಸಂಕಷ್ಟದ ಸಮಯದಲ್ಲಿ ಸವಾಲಿನ ಸಮಯದಲ್ಲಿ ವಿದ್ಯಾರ್ಥಿಗಳು ಬಹು ಆಯ್ಕೆ ಉತ್ತರಗಳಿಗೆ ಪರೀಕ್ಷೆ ಬರೆದಿದ್ದರು. 40 ಅಂಕಗಳಿಗೆ ನಡೆದ ಈ ಪರೀಕ್ಷೆ ಜೂ. 19 ಮತ್ತು 22 ರಂದು ಎರಡು ದಿನ ನಡೆದಿತ್ತು. ಶೇ 99.65 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ದಾಖಲೆ ಬರೆದಿದ್ದರು.
ಎಸ್ಎಸ್ಎಲ್ಸಿ ಫಲಿತಾಂಶವನ್ನು ನೀವು kseeb.kar.nic.in ಅಥವಾ karresults.nic.in. ವೆಬ್ಸೈಟ್ನಲ್ಲಿ ವೀಕ್ಷಿಸಬಹುದು. ಇದಷ್ಟೇ ಅಲ್ಲದೆ, examresults.net ಮತ್ತು indiaresults.com ವೆಬ್ಸೈಟ್ನಲ್ಲಿ ಕೂಡ ರಿಸಲ್ಟ್ ನೋಡಬಹುದು.
https://sslc.karnataka.gov.in ಅಥವಾ karresults.nic.in ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಬಳಿಕ ವೆಬ್ಸೈಟ್ನಲ್ಲಿ ರಿಸಲ್ಟ್ ವೀಕ್ಷಿಸಲು ಹೀಗೆ ಮಾಡಿ.
ವೆಬ್ಸೈಟ್ ಓಪನ್ ಮಾಡಿ ನಂತರ ಹೋಂ ಪೇಜ್ನಲ್ಲಿ ಎಸ್ಎಸ್ಎಲ್ಸಿ ರಿಸಲ್ಟ್ ಎಂಬ ಆಯ್ಕೆಯನ್ನು ಒತ್ತಿ.
ನಿಮ್ಮ ಪರೀಕ್ಷೆಯ ರೋಲ್ ನಂಬರ್ ಮತ್ತು ಪೇಜ್ನಲ್ಲಿ ಕೇಳುವ ಮಾಹಿತಿಯನ್ನು ಭರ್ತಿ ಮಾಡಿ.
ಹಾಲ್ ಟಿಕೆಟ್ನ ಮಾಹಿತಿಯನ್ನು ವೆಬ್ಸೈಟ್ನಲ್ಲಿ ವೇರಿಫೈ ಮಾಡಿಕೊಳ್ಳಿ. ಆಗ ನಿಮ್ಮ ಪರೀಕ್ಷೆ ಫಲಿತಾಂಶ ಸಿಗುತ್ತದೆ.
ನಂತರ ಆ ಫಲಿತಾಂಶವನ್ನು ಪಿಡಿಎಫ್ ಫಾರ್ಮಾಟ್ನಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಿ. ಹಾಗೇ, ಒಂದು ಕಾಪಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಿ
Aditya gadkar
20210195484