ಕೊಡಗಿನಲ್ಲಿ 24ರಿಂದ ನಾಲ್ಕು ದಿನ ನಿಷೇಧಾಜ್ಞೆ ಜಾರಿ: ಕಾಂಗ್ರೆಸ್‌ ಪ್ರತಿಭಟನೆ ಮುಂದಕ್ಕೆ

ಮಡಿಕೇರಿ: ಮಳೆಹಾನಿ ಪೀಡಿತ ಪ್ರದೇಶಗಳನ್ನು ವೀಕ್ಷಿಸಲು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ರಾಜ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆ ಪ್ರತಿಭಟಿಸಿ ಕಾಂಗ್ರೆಸ್ ನಾಯಕರು ಇದೇ 26ರಂದು ಮಡಿಕೇರಿ ಚಲೋ ಹಮ್ಮಿಕೊಂಡಿದ್ದು, ಜಿಲ್ಲಾ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಇದೇ ದಿನ ಬಿಜೆಪಿ ಜನಜಾಗೃತಿ ಸಮಾವೇಸವೂ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ ಮಡಿಕೇರಿ ಜಿಲ್ಲಾಡಳಿತ ಈಗ ಕೊಡಗು ಜಿಲ್ಲೆಯಾದ್ಯಂತ ನಾಲ್ಕು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿದೆ.
ಆಗಸ್ಟ್ 24ರ ಬೆಳಗ್ಗೆ 6 ಗಂಟೆಯಿಂದ ಆಗಸ್ಟ್ 27 ಸಾಯಂಕಾಲ 6 ಗಂಟೆಯವರೆಗೆ ಸೆಕ್ಷನ್ 144 ಜಾರಿ ಮಾಡಲಾಗಿದೆ. ಈ ದಿನಗಳಲ್ಲಿ ಮದ್ಯ ಮಾರಾಟವನ್ನು ಕೂಡ ನಿಷೇಧಿಸಲಾಗಿದೆ.

ಈ ಕುರಿತು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಆದೇಶ ಹೊರಡಿಸಿದ್ದಾರೆ. ಐದು ಜನಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ. ನಿಷೇಧಾಜ್ಞೆ ಜಾರಿಯಲ್ಲಿರುವ 4 ದಿನ ಯಾವುದೇ ಸಭೆ, ಸಮಾರಂಭ, ಮೆರವಣಿಗೆ, ಪ್ರತಿಭಟನೆ ಹಾಗೂ ರ್ಯಾಲಿ ನಡೆಸುವಂತಿಲ್ಲ. ಸರ್ಕಾರದ ಆದೇಶವನ್ನು ಧಿಕ್ಕರಿಸಿ ಕಾರ್ಯಕ್ರಮ ನಡೆದರೆ ಬಂಧನವಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಆದರೆ ಪೂರ್ವನಿಯೋಜಿತ ಸರ್ಕಾರಿ, ಖಾಸಗಿ ಕಾರ್ಯಕ್ರಮಕ್ಕೆ ಅಡ್ಡಿಯಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಎಸ್‌ಐಆರ್‌-2026 ಅಂತಿಮ ಪಟ್ಟಿ ಪ್ರಕಟ ; ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 11,39,623 ಮತದಾರರು

ಬೆಂಗಳೂರು : ಕಾಂಗ್ರೆಸ್‌ನ ಮಡಿಕೇರಿ ಚಲೋ ಮುಂದಕ್ಕೆ
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತದ ಘಟನೆ ಖಂಡಿಸಿದ್ದ ಕಾಂಗ್ರೆಸ್ ಕರೆ ನೀಡಿದ್ದ ಮಡಿಕೇರಿ ಚಲೋ ಮುಂದೂಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಆದೇಶ ಎಂದರೆ ಸರ್ಕಾರದ ಆದೇಶ. ಜವಾಬ್ದಾರಿಯುತ ಪ್ರತಿಪಕ್ಷವಾಗಿ ನಾವು ಸರ್ಕಾರದ ಆದೇಶವನ್ನು ಪರಿಪಾಲಿಸುತ್ತೇವೆ. ಕೊಡಗು ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಮುಂದೂಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಪಕ್ಷದ ನಿರ್ಧಾರದಂತೆ ಸದ್ಯ ಹೋರಾಟ ಮುಂದೂಡಲಾಗಿದೆ. ಕೊಡಗಿನಲ್ಲಿ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು. ಕಳಪೆ ಕಾಮಗಾರಿ ನೋಡಲು ಅಡ್ಡಿ ಪಡಿಸುವ ಉದ್ದೇಶದಿಂದ ಮೊಟ್ಟೆ ಹೊಡೆದರು. ಸರ್ಕಾರ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಕೊಡಗಲ್ಲಿ ಪ್ರತಿಭಟಿಸುತ್ತೇವೆ ಎಂದು ಆಕ್ರೋಶ ಹೊರಹಾಕಿದರು.

ಪ್ರಮುಖ ಸುದ್ದಿ :-   ಬೆಳಗಾವಿ| ಕಬ್ಬು ದರ ನಿಗದಿ ; ಸಿಎಂ ಸಭೆಗೂ ಮುನ್ನ ಕೈಕೈ ಮಿಲಾಯಿಸಿದ ಇಬ್ಬರು ರೈತ ನಾಯಕರ ಬೆಂಬಲಿಗರು

ಕೊಡಗು ಜಿಲ್ಲೆಯಲ್ಲಿ 4 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸುವ ಜಿಲ್ಲಾಧಿಕಾರಿ ಆದೇಶವನ್ನು ನಾನು ಒಪ್ಪುವುದಿಲ್ಲ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಹೇಳಿದರು. ‘ಸರ್ಕಾರ ಯಾಕೆ ಹೀಗೆ ಮಾಡಿತೋ ಗೊತ್ತಿಲ್ಲ. ನಾವು ಎಲ್ಲದಕ್ಕೂ ರೆಡಿ ಇದ್ದೆವು. ನಿಷೇಧಾಜ್ಞೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡುತ್ತೇವೆ. ಸರ್ಕಾರ ನಮ್ಮದೇ ಇದೆ, ಹಾಗಾಗಿ ಸಿಎಂ ಬಳಿ ಮಾತಾಡುತ್ತೇನೆ. ನಮಗೆ ಕೊಡಗಿನಲ್ಲಿ ಅಪಾರ ಜನ ಬೆಂಬಲ ವ್ಯಕ್ತವಾಗಿದೆ’ ಎಂದು ಹೇಳಿದರು.

 

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement