ಉತ್ತರ ಪ್ರದೇಶ: ಯುವತಿ ಅತ್ಯಾಚಾರಕ್ಕೆ ಯತ್ನಿಸಿ ಬೆಂಕಿ ಇಟ್ಟ ದುರುಳರು

ಶಹಜಹಾನ್‌ಪುರ: ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರಕ್ಕೆ ಯತ್ನಿಸಿ, ವಿಫಲಗೊಂಡ ದುಷ್ಕರ್ಮಿಗಳು ಸೀಮೆಎಣ್ಣೆ ಸುರಿದು ಆಕೆಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದ ಶಹಜಾನ್‌ಪುರದ ರಾಯ್‌ಖೇಡಾ ಗ್ರಾಮದ ಬಳಿ ನಡೆದಿದೆ.
ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ ಬಳಿ ಯುವತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ನೋಡಿದ ಸ್ಥಳಿಯರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಐವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಶೇ.೭೦ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿರುವ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆ ಸ್ನಾತಕೋತ್ತರ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಇತ್ತೀಚಿಗೆ ರಾಜ್ಯದಲ್ಲಿ ಗದ್ದೆಗೆ ತೆರಳಿದ್ದ ಇಬ್ಬರು ಸೋದರಿಯರ ಮೇಲೆ ಅತ್ಯಾಚಾರ ಮಾಡಲಾಗಿತ್ತು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದೆಹಲಿ ಹೈಕೋರ್ಟ್ ಮರುಮೌಲ್ಯಮಾಪನದ ಅರ್ಜಿ ತಿರಸ್ಕರಿಸಿದ ನಂತರ ಕಾಂಗ್ರೆಸ್ಸಿಗೆ 1700 ಕೋಟಿ ತೆರಿಗೆ ನೋಟಿಸ್ ನೀಡಿದ ಐಟಿ : ಮೂಲಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement