ಮಹಿಳಾ ದಿನ: ಕೃಷಿ ಕಾಯ್ದೆ ವಿರೋಧಿಸಿ ಹೋರಾಟಕ್ಕೆ ಧುಮುಕಿದ ಸಾವಿರಾರು ಮಹಿಳೆಯರು

ನವ ದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನದಂದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೂರು ಕೃಷಿ ಮಸೂದೆಗಳ ವಿರುದ್ಧ ಸಾವಿರಾರು ಮಹಿಳಯರು ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಪಾಲ್ಗೊಂಡರು.
ರೈತರು ಕಳೆದ 102 ದಿನಗಳಿಂದ ವ್ಯಾಪಕ ಹೋರಾಟ ನಡೆಸುತ್ತಿದ್ದಾರೆ. ಈ ಕಾಯ್ದೆಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸೋಮವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೃಷಿ ಕಾಯ್ದೆಗಳ ವಿರುದ್ಧ ಸಾವಿರಾರು ಮಹಿಳೆಯರು ದೆಹಲಿಯ ಗಡಿಗಳಲ್ಲಿ ಒಟ್ಟುಗೂಡಿ ಪ್ರತಿಭಟನೆ ನಡೆಸುವ ಮೂಲಕ ಇಡೀ ದೇಶದ ಗಮನ ಸೆಳೆದಿದ್ದಾರೆ.
ದೆಹಲಿಯ ಟಿಕ್ರಿ ಗಡಿಯಲ್ಲಿ ಜಮಾಯಿಸಿದ ಸಾವಿರಾರು ಮಹಿಳೆಯರು ಹೋರಾಟದ ವೇದಿಕೆಯನ್ನು ಆಕ್ರಮಿಸಿಕೊಂಡರು. ಸೋಮವಾರ ಮಹಿಳಾ ದಿನಾಚರಣೆಯ ಅಂಗವಾಗಿ ರೈತ ಹೋರಾಟದ ವೇದಿಕೆಯನ್ನು ಸಂಪೂರ್ಣವಾಗಿ ಮಹಿಳೆಯರಿಗೆ ಮೀಸಲಿಡಲಾಗಿತ್ತು.
ಹರಿಯಾಣದ ಟಿಕ್ರಿ ಗಡಿ ಬಳಿಯ ಬಹದ್ದೂರ್‌ಗರ್‌ನ ಪಕೋರಾ ಚೌಕ್‌ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಲಕ್ಷಾಂತರ ಮಹಿಳೆಯರು ಒಟ್ಟುಗೂಡಿದ್ದಾರೆ. ಭಾರತೀಯ ಕಿಸಾನ್ ಯೂನಿಯನ್ ಉಗ್ರಾಣ ಆಯೋಜಿಸಿದ್ದ ಈ ಸಮಾವೇಶದಲ್ಲಿ ಪಂಜಾಬ್‌ ಮತ್ತು ಹರಿಯಾಣದ ಮಹಿಳೆಯರು ಸೇರಿ ಇಡೀ ಕಾರ್ಯಕ್ರಮವನ್ನು ಮುನ್ನಡೆಸುತ್ತಿದ್ದಾರೆ. ಎಲ್ಲ ಭಾಷಣಕಾರರು ಮಹಿಳೆಯರೇ ಆಗಿದ್ದು, ಸಾವಿರಾರು ಪುರುಷರು ಸಹ ಹೋರಾಟದಲ್ಲಿ ಭಾಗಿಯಾಗಿದ್ದಾರೆ.

ಪ್ರಮುಖ ಸುದ್ದಿ :-   ಏಪ್ರಿಲ್‌ ತಿಂಗಳಲ್ಲಿ ದಾಖಲೆಯ ಪ್ರಮಾಣದ ಜಿಎಸ್‌ಟಿ ಸಂಗ್ರಹ ; ಕರ್ನಾಟಕಕ್ಕೆ 2ನೇ ಸ್ಥಾನ

5 / 5. 1

ಶೇರ್ ಮಾಡಿ :

  1. geek

    ೭೦ ಸಾವಿರಕ್ಕೂ ಹೆಚ್ಚು ರೈತ ಮಹಿಳೆಯರು ಸೇರಿ ಪ್ರತಿಭಟನೆ ಮಾಡಿದ್ದು ವಿಶೇಷವೇ ಸರಿ. ಮೋದಿ ಸರಕಾರ ಆದಷ್ಟು ರೈತರ ಭಾವನೆಗಳನ್ನು ಅರಿತುಕೊಳ್ಳುವುದು ಒಳ್ಳೆಯದು

ನಿಮ್ಮ ಕಾಮೆಂಟ್ ಬರೆಯಿರಿ

advertisement