ಬೆಂಗಳೂರು : ಯುವಕನ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಜೀವ ಬೆದರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಆದೇಶವನ್ನು ಜುಲೈ 18ಕ್ಕೆ ಕಾಯ್ದಿರಿಸಿದೆ.
ಸೂರಜ್ ಬೆಂಬಲಿಗ ಎನ್ನಲಾಗಿರುವ ಎಂ.ಎಲ್. ಶಿವಕುಮಾರ ಎಂಬವರು ದಾಖಲಿಸಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಸೋಮವಾರ ನಡೆಸಿದರು.
ಸೂರಜ್ ಪರ ವಕೀಲ ನಿಖಿಲ್ ಕಾಮತ್ ಮತ್ತು ಸಿಐಡಿ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಅಶೋಕ ನಾಯಕ್ ವಾದಗಳನ್ನು ಆಲಿಸಿದ ನ್ಯಾಯಾಲಯವು ಜುಲೈ 18ರಂದು ಆದೇಶ ಪ್ರಕಟಿಸುವುದಾಗಿ ಹೇಳಿದೆ.
ನಿಮ್ಮ ಕಾಮೆಂಟ್ ಬರೆಯಿರಿ