ಬೆಂಗಳೂರು: ಶಾಸಕ ಅರವಿಂದ್ ಬೆಲ್ಲದ್ ಇದೀಗ ಫೋನ್ ಕದ್ಧಾಲಿಕೆಯ ಆರೋಪ ಮಾಡಿದ್ದಾರೆ. ನನ್ನ ಫೋನ್ ಟ್ಯಾಪ್ ಆಗಿದೆ. ನನ್ನನ್ನ ಫಾಲೋ ಮಾಡುತ್ತಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ಆರೋಪಿಸಿದ್ದಾರೆ.
ಹತ್ತು ದಿನಗಳ ಹಿಂದೆ ಯುವರಾಜ ಸ್ವಾಮಿ ಕರೆ ಮಾಡಿದ್ದ. ಕರೆ ಮಾಡಿದ್ದರ ಹಿಂದೆ ದೊಡ್ಡ ಪಿತೂರಿ ಇದೆ ಅನಿಸುತ್ತಿದೆ ಎಂದು ಕುಮಾರಕೃಪಾ ಗೆಸ್ಟ್ಹೌಸ್ ಬಳಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ತಿಳಿಸಿದ್ದಾರೆ.
ನನ್ನನ್ನು ಅನಗತ್ಯವಾಗಿ ಜೈಲಿಗೆ ಹಾಕಿದ್ದಾರೆಂದು ಹೇಳಿದ್ದ. ನನಗೆ ಸಹಾಯ ಮಾಡಿ ಎಂದೆಲ್ಲ ಕೇಳಿದ್ದ. ಆದರೆ ಈ ಕರೆಯ ಹಿಂದೆ ನನ್ನ ವಿರುದ್ಧ ದೊಡ್ಡ ಪಿತೂರಿಯೇ ಇದೆ ಎಂದು ಅನ್ನಿಸಿ ಈ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ದೂರು ನೀಡಿದ್ದೇನೆ. ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದೇನೆ ಎಂದು ಶಾಸಕ ಅರವಿಂದ್ ಬೆಲ್ಲದ ತಿಳಿಸಿದರು.
ನಮ್ಮ ತಂದೆ ಚಂದ್ರಕಾಂತ ಬೆಲ್ಲದ್ 5 ಬಾರಿ ಶಾಸಕರಾಗಿದ್ದರು. ನಮ್ಮ ತಂದೆ, ನಾನು ಕಪ್ಪು ಚುಕ್ಕೆ ಇಲ್ಲದೆ ಕೆಲಸ ಮಾಡಿದ್ದೇವೆ. ನನ್ನ ಫೋನ್ ಟ್ಯಾಪ್ ಆಗ್ತಿದೆ, ನನ್ನನ್ನು ಫಾಲೋ ಮಾಡ್ತಿದ್ದಾರೆ ಎಂದು ಅನಿಸಿದೆ ಎಂದು ಬೆಲ್ಲದ ಹೇಳಿದ್ದಾರೆ..
ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿಗೂ ಮನವಿ ಮಾಡಿದ್ದೇನೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದೇನೆ. ಜೈಲಿನಲ್ಲಿರುವ ವ್ಯಕ್ತಿ ಕರೆ ಮಾಡುತ್ತಾನೆ ಅಂದರೆ ಹೇಗೆ ಸಾಧ್ಯ? ಜೈಲಿನಲ್ಲಿರುವ ವ್ಯಕ್ತಿಗೆ ಮೊಬೈಲ್ ಸಿಗಲು ಹೇಗೆ ಸಾಧ್ಯವಿದೆ. ಕರೆಮಾಡಿದ್ದ ವ್ಯಕ್ತಿ ನಾನು ಸ್ವಾಮಿ ಎಂದು ಪರಿಚಯಿಸಿಕೊಂಡಿದ್ದ ಎಂದು ಬೆಲ್ಲದ್ ಅವರು ಮಾಹಿತಿ ಬಿಚ್ಚಿಟ್ಟಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ