ಕರ್ನಾಟಕದ 9 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; 4 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (ಕೆಎಸ್ ಎನ್ ಡಿಎಂಸಿ) ನೀಡಿರುವ ಪ್ರಕಟಣೆಯ ಪ್ರಕಾರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಇಂದು (ಆಗಸ್ಟ್‌ 20) ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಆಗಸ್ಟ್‌ 20ರ ಬೆಳಗ್ಗೆಯಿಂದ 21ರ ಬೆಳಗ್ಗೆ ನಡುವಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಜಿಲ್ಲೆಗಳಿಗೆ ಆಗಸ್ಟ್‌ 20 ಹಾಗೂ 24ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅದರಂತೆ, ಅಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಆಗಸ್ಟ್‌ 21, 22, 23ರಂದು ಸಾಮಾನ್ಯವಾಗಿ ಮಳೆಯಾಗಲಿದೆ ಎಂದು ಹೇಳಿದೆ. ಅಲ್ಲದೆ, ಈ ದಿನಗಳಲ್ಲಿ ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡಿನ ಭಾಗಗಳಲ್ಲಿಯೂ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಲಾಗಿದೆ. ಹಾಗೂ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಆಗಸ್ಟ್‌ 21ರಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಆಗಸ್ಟ್‌ 20ರಿಂದ ಹಗುರದಿಂದ ಸಾಧಾರಣ ಮಳೆಯಾಗಬಹುದು. ಆಗಸ್ಟ್‌ 24ರಂದು ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement