ಕನ್ನಡ ಕಿರುತೆರೆಯಿಂದ ಜೊತೆ ಜೊತೆಯಲಿ​ ಧಾರವಾಹಿ ನಟ ಅನಿರುದ್ಧ ಎರಡು ವರ್ಷ ಬ್ಯಾನ್..?!

ಬೆಂಗಳೂರು: ಕನ್ನಡ ಕಿರುತೆರೆಯಿಂದಲೇ ಅನಿರುದ್ಧ್​ ಅವರನ್ನು 2 ವರ್ಷ ಬ್ಯಾನ್​ ಮಾಡಲಾಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಕನ್ನಡದ ಜನಪ್ರಿಯ ‘ಜೊತೆ ಜೊತೆಯಲಿ ’ಧಾರವಾಹಿಯ ನಾಯಕ ನಟ ಅನಿರುದ್ಧ ಅವರ ಮೇಲೆ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ 2 ವರ್ಷಗಳ ಕಾಲ ನಿಷೇಧ ಹೇರಿದೆ ಎಂದು ವರದಿಯಾಗಿದೆ.
ಧಾರಾವಾಹಿಯ ನಿರ್ಮಾಪಕ ಅರೂರು ಜಗದೀಶ ಅವರ ದೂರಿನ ಮೇರೆಗೆ ಈ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಧಾರಾವಾಹಿ ನಿರ್ಮಾಪಕರೆಲ್ಲರೂ ಒಮ್ಮತದಿಂದ ಈ ಕ್ರಮ ಕೈಗೊಂಡಿದ್ದಾರೆ. ಕಿರುತೆರೆಯ ಯಾವುದೇ ಕಾರ್ಯಕ್ರಮಗಳಲ್ಲಿ ಅನಿರುದ್ಧ ಅವರಿಗೆ ಅವಕಾಶ ಕೊಡಬಾರದು ಎಂದು ನಿರ್ಧರಿಸಲಾಗಿದೆ ಎಂದು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ ಅವರು ತಿಳಿಸಿದ್ದಾರೆ.

ಸ್ಕ್ರಿಪ್ಟ್ ವಿಚಾರಕ್ಕೆ ನಿಂದಿಸಿ ಶೂಟಿಂಗ್ ಸೆಟ್​ನಿಂದ ಹೊರ ಹೋಗಿದ್ದಾರೆ. ಆ ಸಂಬಂಧ ಜಗಳವಾಡಿದ್ದಾರೆ. ಇಂತಹ ಘಟನೆ ಹಲವು ಸಲ ನಡೆದಿದೆ ಹೀಗಾಗಿ ಈ ನಿರ್ಧಾರ ಮಾಡಿದ್ದೇವೆ ಎಂದು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ. ಆದರೆ ಇದಕ್ಕೆ ತದ್ವಿರುದ್ದವಾಗಿ “ನಿಷೇಧ” ಇಂತಹ ಕ್ರಮಕ್ಕೆ ಯಾವುದೇ ಅವಕಾಶವಿಲ್ಲ. ಮೆಗಾ ಸೀರಿಯಲ್ ಸೆಟ್​ಗಳಲ್ಲಿ ಈ ರೀತಿ ಘಟನೆ ಸರ್ವೆ ಸಾಮಾನ್ಯ. ಧಾರವಾಹಿ ಪ್ರಸಾರ ಆಗುತ್ತಿರುವ ಚಾನೆಲ್​ ಕಲಾವಿದನನ್ನು ನಿಷೇಧಿಸಬಹುದು. ಇದರ ಹೊರತಾಗಿ ಏಕಾಏಕಿ ಯಾರನ್ನೂ ಬ್ಯಾನ್ ಮಾಡುವ ಅವಕಾಶ ಇಲ್ಲ. ಅವುಗಳನ್ನೆಲ್ಲಾ ಕೂತು ಅವರೇ ಬಗೆಹರಿಸಿಕೊಳ್ಳಬೇಕು ಎಂದು ಟೆಲಿವಿಷನ್ ಅಸೋಸಿಯೇಷನ್ ಹೇಳಿದೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement