ಗುಂಡು ಹಾರಿಸಿ ಹೆಂಡತಿ, ಅಳಿಯನನ್ನು ಕೊಂದ ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹಿರಿಯ ಪೊಲೀಸ್‌ ಅಧಿಕಾರಿ

ಪುಣೆ : 57 ವರ್ಷದ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಸೋಮವಾರ ಮಹಾರಾಷ್ಟ್ರದ ಪುಣೆ ನಗರದಲ್ಲಿನ ತನ್ನ ಮನೆಯಲ್ಲಿ ತನ್ನ ಪತ್ನಿ ಮತ್ತು ಸೋದರಳಿಯನನ್ನು ಬಂದೂಕಿನಿಂದ ಗುಂಡಿಕ್ಕಿ ಕೊಂದಿದ್ದಾರೆ ಹಾಗೂ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾನೇರ್ ಪ್ರದೇಶದ ಎಸಿಪಿ ಭರತ್ ಗಾಯಕ್ವಾಡ ಅವರ ಬಂಗಲೆಯಲ್ಲಿ ಬೆಳಗಿನ ಜಾವ 3:30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಚತುರ್ಶೃಂಗಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಗಾಯಕ್ವಾಡ ಅವರನ್ನು ಅಮರಾವತಿಯಲ್ಲಿ ಎಸಿಪಿಯಾಗಿ ನಿಯೋಜಿಸಲಾಗಿದ್ದು, ಅವರು ಮನೆಗೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಬೆಳಗಿನ ಜಾವ 3:30ರ ಸುಮಾರಿಗೆ ಎಸಿಪಿ ತನ್ನ ಪತ್ನಿಯ ತಲೆಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನ ಸದ್ದು ಕೇಳಿದ ಅವರ ಮಗ ಮತ್ತು ಸೋದರಳಿಯ ಓಡಿಬಂದು ಬಾಗಿಲು ತೆರೆದಿದ್ದಾರೆ. ಬಾಗಿಲು ತೆರೆದ ಕ್ಷಣದಲ್ಲಿ ಅವರು ತಮ್ಮ ಸೋದರಳಿಯನ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ಗಾಯಕ್ವಾಡ ತನ್ನ ತಲೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಮೂವರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದರು.
ಇನ್ನಿಬ್ಬರು ಮೃತರನ್ನು ಪೊಲೀಸ್ ಅಧಿಕಾರಿಯ ಪತ್ನಿ ಮೋನಿ ಗಾಯಕ್ವಾಡ (44) ಮತ್ತು ಸೋದರಳಿಯ ದೀಪಕ (35) ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಗಾಯಕ್ವಾಡ ಅವರನ್ನು ಅಮರಾವತಿಯಲ್ಲಿ ಎಸಿಪಿಯಾಗಿ ನಿಯೋಜಿಸಲಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದು, ಅವರು ಪತ್ನಿ, ಮಕ್ಕಳು ಮತ್ತು ಮೃತ ಸೋದರಳಿಯನೊಂದಿಗೆ ಪುಣೆಯ ಬನೇರ್‌ನಲ್ಲಿ ವಾಸಿಸುತ್ತಿದ್ದರು ಮತ್ತು ಅವರು ಶನಿವಾರ ಅಮರಾವತಿಯಿಂದ ಮನೆಗೆ ಬಂದಿದ್ದರು. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ...| ಶಿವಸೇನೆ ನಾಯಕಿ ಕರೆದೊಯ್ಯಲು ಬಂದಿದ್ದ ಹೆಲಿಕಾಪ್ಟರ್ ಅಪಘಾತ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement