ಎಸ್‌.ಎಂ. ಕೃಷ್ಣ ನಿಧನ ; ನಾಳೆ (ಡಿ.11) ರಾಜ್ಯದಲ್ಲಿ ರಜೆ ಘೊಷಣೆ : 3 ದಿನ ಶೋಕಾಚರಣೆ

ಬೆಂಗಳೂರು: ಇಂದು, ಮಂಗಳವಾರ ಮುಂಜಾನೆ ಮೃತರಾದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರ ಗೌರವಾರ್ಥ ರಾಜ್ಯ ಸರ್ಕಾರ (Karnataka Government) ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಹಾಗೂ ನಾಳೆ ಬುಧವಾರ (ಡಿಸೆಂಬರ್ 11) ರಜೆ (Government Holiday) ಘೋಷಣೆ ಮಾಡಿದೆ.
ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ಬುಧವಾರ ಶಾಲೆ- ಕಾಲೇಜು- ಸರ್ಕಾರಿ ಕಚೇರಿಗಳು ಕಾರ್ಯಾಚರಿಸುವುದಿಲ್ಲ. ಡಿಸೆಂಬರ್​ 10ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್.ಎಂ. ಕೃಷ್ಣ ನಿಧನರಾದ ಬೆನ್ನಲ್ಲೇ ಅವರ ತವರಾದ ಮಂಡ್ಯ ಜಿಲ್ಲೆಯಲ್ಲಿ ಸ್ಥಳೀಯ ಜಿಲ್ಲಾಡಳಿತ ರಜೆ ಘೋಷಣೆ ಮಾಡಿತ್ತು. ಇದೀಗ ಸರ್ಕಾರ ಅಧಿಕೃತವಾಗಿ ರಾಜ್ಯಾದ್ಯಂತ ರಜೆ ಘೋಷಣೆ ಮಾಡಿದೆ. ಬುಧವಾರ ಬೆಳಗ್ಗೆ 8ಗಂಟೆ ವರೆಗೆ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಎಸ್ಎಂ ಕೃಷ್ಣ ಪಾರ್ಥಿವ ಶರೀರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ. ಬಳಿಕ 10 ಗಂಟೆಯಿಂದ ಮಧ್ಯಾಹ್ನ ಮೂರು ಗಂಟೆ ವರೆಗೂ ಎಸ್ಎಂ ಕೃಷ್ಣ ಜನಿಸಿದ ಊರಾದ ಮದ್ದೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ಡಿಸೆಂಬರ್ 11ರ ಮಧ್ಯಾಹ್ನ 3 ಗಂಟೆ ನಂತರ ಎಲ್ಲಾ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ತಾಯಿ ಗದರಿದ ಕೋಪಕ್ಕೆ ಕೆರೆಗೆ ಹಾರಿದ 14 ವರ್ಷದ ಮಗಳು ; ರಕ್ಷಿಸಲು ಹೋದ ತಾಯಿಯೂ ಮುಳುಗಿ ಸಾವು

ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement