ಬಂದ್‌ ಮಧ್ಯೆ ಕರ್ನಾಟಕಕ್ಕೆ ಮತ್ತೆ ಶಾಕ್ : ಅಕ್ಟೋಬರ್‌ 15ರ ವರೆಗೆ ತಮಿಳುನಾಡಿಗೆ ನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯುಎಂಎ ಆದೇಶ

ನವದೆಹಲಿ: ಕಾವೇರಿ ನದಿ ನೀರಿಗಾಗಿ ಇಂದು ಶುಕ್ರವಾರ ಕರ್ನಾಟಕ ಬಂದ್ ನಡೆಯುತ್ತಿರುವ ಮಧ್ಯೆಯೇ ದೆಹಲಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಸಭೆಯಲ್ಲಿ ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪಾಲಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ.
ಮೂರು ದಿನಗಳ ಹಿಂದೆ ನಡೆದ ಸಭೆಯ ನಂತರ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಯು ಅಕ್ಟೋಬರ್ 15ರವರೆಗೆ ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯೂಸೆಕ್‌ ನೀರನ್ನು ಹರಿಸುವ ಸೂಚನೆಯನ್ನು ಪಾಲಿಸುವಂತೆ ಕರ್ನಾಟಕಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವು ಇಂದು ಶುಕ್ರವಾರ ಸೂಚಿಸಿದೆ. ಆ ಮೂಲಕ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿದೆ.
ತಮಿಳುನಾಡು ಮತ್ತು ಕರ್ನಾಟಕ ಉಭಯ ಸರ್ಕಾರಗಳ ಬೇಡಿಕೆಯನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಿರಸ್ಕರಿಸಿದ್ದು, ನಿತ್ಯ 3 ಸಾವಿರ ಕ್ಯೂಸೆಕ್‌ ನೀರನ್ನು ಹರಿಸುವ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ.

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

ಬಾಕಿ ನೀರು ಬಿಡುವಂತೆ ತಮಿಳುನಾಡು ಪಟ್ಟು
ಇಂದು ನಡೆದ ಸಭೆಯಲ್ಲಿ ತಮಿಳುನಾಡು ನಿತ್ಯ 12,500 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದುಒತ್ತಾಯಿಸಿತು. ಅಲ್ಲದೆ, ಕರ್ನಾಟಕ ಬಾಕಿ ಉಳಿಸಿಕೊಂಡಿರುವ 12 ಟಿಎಂಸಿ ಬ್ಯಾಕ್ ಲಾಗ್ ನೀರನ್ನು ಸಹ ಬಿಡಬೇಕು ಎಂದು ಆದೇಶ ನೀಡಬೇಕು ಎಂದು ವಾದಿಸಿತ್ತು. ಜೂನ್​ನಿಂದ ಸೆಪ್ಟೆಂಬರ್​ವರೆಗೆ ಕರ್ನಾಟಕ 123 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ, ಈವರೆಗೆ ಕೇವಲ 40 ಟಿಎಂಸಿ ನೀರು ಮಾತ್ರ ಹರಿಸಿದೆ. ಬಾಕಿ 83 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಸೂಚಿಸಬೇಕು ಎಂದು ಸಿಡಬ್ಲ್ಯುಎಂಎ ಸಭೆಯಲ್ಲಿ ತಮಿಳುನಾಡು ಸರ್ಕಾರದ ಪರ ಅಧಿಕಾರಿಗಳು ವಾದ ಮಂಡನೆ ಮಾಡಿದರು.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕರ್ನಾಟಕದ ಪರ ಅಧಿಕಾರಿ ಸಿಂಗ್, ರಾಜ್ಯದಲ್ಲಿ ಸಾಕಷ್ಟು ಮಳೆ ಕೊರತೆ ಇದೆ. ರಾಜ್ಯದ ಡ್ಯಾಂಗಳಲ್ಲಿ ಸಾಕಷ್ಟು ನೀರಿಲ್ಲ. ಮುಂದಿನ ಜೂನ್ ತಿಂಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಯಾವುದೇ ಆಶಾಭಾವವಿಲ್ಲ. ಬೆಂಗಳೂರು ಮತ್ತು ಇತರೆ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಬೇಕು. ಆದರೆ ತಮಿಳುನಾಡಿನ ಪರಿಸ್ಥಿತಿ ಹೀಗಿಲ್ಲ. ಅಲ್ಲಿ ಹಿಂಗಾರು ಮಳೆ ಇದೆ. ಹಿಂಗಾರು ಮಳೆಯಿಂದ ಮೆಟ್ಟೂರು ಡ್ಯಾಂ ತುಂಬುತ್ತದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ರಾಕೇಶ್ ಸಿಂಗ್ ಆಕ್ಷೇಪವ್ಯಕ್ತಪಡಿಸಿದರು.
ಅಂತಿಮವಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್‌ ನೀರನ್ನು ಹರಿಸುವ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಪಾಲಿಸುವಂತೆ ಆದೇಶ ನೀಡಿದೆ.

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement