ತಿರುಪತಿ ಬೆಟ್ಟದಲ್ಲಿ ಚಿರತೆ ದಾಳಿ ಪ್ರಕರಣ : ಮಕ್ಕಳನ್ನು ಪಾದಚಾರಿ ಮಾರ್ಗದಲ್ಲಿ ಕರೆದುಕೊಂಡು ಹೋಗುವ ಸಮಯ ಬದಲು

ತಿರುಪತಿ: ಇತ್ತೀಚಿಗೆ ಮಕ್ಕಳ ಮೇಲೆ ಚಿರತೆ ದಾಳಿಯ ಘಟನೆಗಳ ನಂತರ ತಿರುಮಲ ತಿರುಪತಿ ದೇವಸ್ಥಾನವು ಸಮೀಪದ ತಿರುಮಲದ ವೆಂಕಟೇಶ್ವರ ದೇವಸ್ಥಾನಕ್ಕೆ ಪಾದಚಾರಿ ಮಾರ್ಗದಲ್ಲಿ ತೆರಳುವ ಯಾತ್ರಾರ್ಥಿಗಳಿಗೆ ಭಾನುವಾರ ನಿರ್ಬಂಧ ವಿಧಿಸಿದೆ.
15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳೊಂದಿಗೆ ಯಾತ್ರಾರ್ಥಿಗಳಿಗೆ ಪಾದಚಾರಿ ಮಾರ್ಗಗಳಲ್ಲಿ ಬೆಳಿಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಚಾರಣಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಅದು ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೆ, ಘಾಟ್ ರಸ್ತೆಗಳಲ್ಲಿ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ದ್ವಿಚಕ್ರ ವಾಹನಗಳ ಸಂಚಾರವನ್ನು ಟಿಟಿಡಿ ನಿರ್ಬಂಧಿಸಿದೆ.
ಇತ್ತೀಚೆಗೆ ತಿರುಮಲದಲ್ಲಿ ಮಕ್ಕಳ ಮೇಲೆ ಎರಡು ಸಲ ಚಿರತೆ ದಾಳಿಯ ಘಟನೆಯ ನಂತರ ಈ ನಿರ್ಧಾರಗಳು ಭಾನುವಾರದಿಂದಲೇ ಜಾರಿಗೆ ಬಂದವು. “ಕಾಡು ಮೃಗಗಳ ದಾಳಿಯ ಹಿನ್ನೆಲೆಯಲ್ಲಿ, ವಿಶೇಷವಾಗಿ ಮಕ್ಕಳನ್ನು ಗುರಿಯಾಗಿಸಿಕೊಂಡು, ಟಿಟಿಡಿ ಎರಡು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ, ಅದು ಭಾನುವಾರದಿಂದಲೇ ಜಾರಿಗೆ ಬಂದಿದೆ” ಎಂದು ಅದು ಪ್ರಕಟಣೆಯಲ್ಲಿ ತಿಳಿಸಿದೆ.
ತಿರುಪತಿ ಶ್ರೀ ವೆಂಕಟೇಶ್ವರ ದೇವಸ್ಥಾನದ ಆಡಳಿತ ನಡೆಸುತ್ತಿರುವ ಟಿಟಿಡಿ, ಐದು ಸ್ಥಳಗಳಲ್ಲಿ ಚಿರತೆಗಳ ಚಲನವಲನವನ್ನು ಗುರುತಿಸಲಾಗಿದೆ, ಇದರಲ್ಲಿ ಮೂರು ಸ್ಥಳಗಳು ಅಲಿಪಿರಿ ಬಳಿಯಿಂದ ಗಾಳಿಗೋಪುರ ಮತ್ತು ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಬಳಿಯ ಪ್ರದೇಶವೂ ಸೇರಿವೆ. ಶನಿವಾರವೂ 38ನೇ ತಿರುವಿನಲ್ಲಿ ಚಿರತೆ ಚಲನವಲನ ಕಂಡು ಬಂತು. ಹಾಗೂ ದಾಳಿ ಮಾಡಿ ಆರು ವರ್ಷದ ಬಾಲಕಿಯನ್ನು ಸಾಯಿಸಿದೆ.

ಪ್ರಮುಖ ಸುದ್ದಿ :-   ನೀವು ಭಾರತದಲ್ಲಿ ಆಪಲ್ ಸಾಧನ ಉತ್ಪಾದನೆ ಮಾಡ್ಬೇಡಿ..; ಆಪಲ್ ಸಿಇಒಗೆ ಡೊನಾಲ್ಡ್ ಟ್ರಂಪ್ ಒತ್ತಡ : ಅಮೆರಿಕ ವರಸೆ ಬದಲಿಸಿದ್ದು ಯಾಕೆ..?

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement