ಮುಂದುವರೆದ ಭಾರೀ ಮಳೆ: ಜುಲೈ 25ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು/ಉಡುಪಿ : ಮಂಗಳವಾರ (ಜುಲೈ 25) ಹವಾಮಾನ ಇಲಾಖೆಯ ಭಾರೀ ಮಳೆ ಮುನ್ಸೂಚನೆ ನೀಡಿ ರೆಡ್‌ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಜು.25ರಂದು ರಜೆ ಘೋಷಣೆ ಮಾಡಲಾಗಿದೆ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜುಲೈ 25ರಂದು ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವಕಾಲೇಜು, ಪದವಿ ಶಿಕ್ಷಣ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ 25ರ ಮಂಗಳವಾರ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಉಡುಪಿ ವರದಿ..: ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 25 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ನೀಡಿದೆ. ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಕಾರವಾರ ವರದಿ…: ಉತ್ತರ ಕನ್ನಡ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪದವಿ ಪೂರ್ವ ಕಾಲೇಜ್‌ಗಳಿಗೆ ಜುಲೈ 25ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತೆ ದೃಷ್ಟಿಯಿಂದ ಜಿಲ್ಲಾಡಳಿತವು ಸೋಮವಾರ ಜುಲೈ 25ರಂದು ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ.

ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement