ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆ

ನವದೆಹಲಿ: ಬಿಜೆಪಿಯಿಂದ ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal) ಅವರನ್ನು ಉಚ್ಚಾಟನೆ ಮಾಡಲಾಗಿದೆ.
ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಸರಿಯಾಗಿ ಉತ್ತರ ನೀಡದ ಕಾರಣ ಬಿಜೆಪಿ (BJP) ಹೈಕಮಾಂಡ್‌ ಈ ನಿರ್ಧಾರವನ್ನು ಕೈಗೊಂಡಿದ್ದು, ತಕ್ಷಣವೇ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಪಕ್ಷದ ಕೇಂದ್ರ ಶಿಸ್ತು ಸಮಿತಿಯು ಮಾರ್ಚ್ 26ರಂದು ಯತ್ನಾಳ ಅವರನ್ನು ಉಚ್ಚಾಟಿಸುವುದಾಗಿ ಪ್ರಕಟಿಸಿದೆ. ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ನೋಟಿಸ್‌ ನೀಡಿದ್ದರೂ ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ, ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಎರಡನೇ ಬಾರಿಗೆ ಫೆ.10 ರಂದು ಶೋಕಾಸ್‌ ನೋಟಿಸ್‌ಗೆ ಯತ್ನಾಳ್‌ ಉತ್ತರ ನೀಡಿದ್ದರು. ಯತ್ನಾಳ ಅವರು ನೀಡಿದ ಉತ್ತರ ಹಾಗೂ ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಇಂದು, ಬುಧವಾರ (ಮಾರ್ಚ್ 26) ಈ ನಿರ್ಧಾರ ಕೈಗೊಂಡಿದೆ.

ಹಿಂದೆ ನೀಡಿದ್ದ ಭರವಸೆಗಳ ಹೊರತಾಗಿಯೂ ಅವರು ಪದೇ ಪದೇ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ ಎಂದು ಸಮಿತಿಯು ಹೇಳಿದೆ.
ಯತ್ನಾಳ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಆರೋಪಗಳನ್ನು ಮಾಡಿಕೊಂಡು ಬರುತ್ತಿದ್ದರು. ಪ್ರತ್ಯೇಕ ಸಭೆ ನಡೆಸಿದ್ದರು. ಈ ಸಂಬಂಧ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು. ಆದರೂ ಯತ್ನಾಳ​ ಇದನ್ನು ಮುಂದುವರಿಸಿದ್ದರು. ಹೀಗಾಗಿ ಮತ್ತೊಂದು ಶೋಕಾಸ್ ನೀಡಲಾಗಿತ್ತು.
ಪಕ್ಷದ ವಿಚಾರವನ್ನು ಹೊರಗಡೆ ಚರ್ಚಿಸಬೇಡಿ ಎಂದು ಬಿಜೆಪಿ ಹೈಕಮಾಂಡ್‌ ಸೂಚಿಸುತ್ತಿದ್ದರೂ ನಾಯಕರು ಪದೇ ಪದೇ ಉಲ್ಲಂಘನೆ ಮಾಡುತ್ತಿದ್ದಾರೆ. ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾ.25 ರಂದು ಎಸ್‌ಟಿ ಸೋಮಶೇಖರ, ಶಿವರಾಮ ಹೆಬ್ಬಾರ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿಪಿ ಹರೀಶ, ರೇಣುಕಾಚಾರ್ಯಗೆ ಶೋಕಾಸ್ ನೋಟಿಸ್ ನೀಡಿತ್ತು.

ಪ್ರಮುಖ ಸುದ್ದಿ :-   ವೀಡಿಯೊಗಳು..| ಭಾರೀ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ತತ್ತರ ; ಬುಲ್ಡೋಜರ್‌ ನಲ್ಲಿ ಪರಿಸ್ಥಿತಿ ವೀಕ್ಷಿಸಿದ ಶಾಸಕ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement