ನೋಟಾಕ್ಕೆ ಹೆಚ್ಚು ಮತ ಬಿದ್ರೆ ಮರುಚುನಾವಣೆ: ಕೇಂದ್ರದ ಅಭಿಪ್ರಾಯ ಕೇಳಿದ ಸುಪ್ರೀಂ ಕೋರ್ಟ್

ನವ ದೆಹಲಿ: ಚುನಾವಣೆಯಲ್ಲಿ ನೋಟಾಕ್ಕೆ ಹೆಚ್ಚುಮತಗಳು ಬಂದಿದ್ದರೆ ಆ ಕ್ಷೇತ್ರದಲ್ಲಿ ಮರುಚುನಾವಣೆ ನಡೆಸಬೇಕು ಎಂದು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ವಿಚಾರಣೆ  ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್‌ ಈ ಸಂಬಂಧ ಕೇಂದ್ರ ಸರ್ಕಾರ ಹಾಗೂ ಚುನಾವಣೆ ಆಯೋಗಕ್ಕೆ ನೋಟಿಸ್‌ ನೀಡಿದ್ದು, ಈ ಕುರಿತು ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ.
ಸೋಮವಾರ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್‌ ಕೈಗೆತ್ತಿಕೊಂಡಿದೆ. ಅರ್ಜಿಯಲ್ಲಿ ಲೋಕಸಭೆ ಅಥವಾ ರಾಜ್ಯ ವಿಧಾನ ಸಭೆಗಳ ಚುನಾವಣೆಗಳು ನಡೆದಾಗ ಯಾವುದೇ ನಿರ್ದಿಷ್ಟ ಕ್ಷೇತ್ರದಲ್ಲಿ ನೋಟಾಕ್ಕೆ ಹೆಚ್ಚು ಮತಗಳು ಬಂದಿದ್ದರೆ, ಆ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಬೇಕು. ಆದರೆ, ಮರು ಚುನಾವಣೆಯಲ್ಲಿ ನೋಟಾ ತೀರ್ಪು ಬಂದಾಗ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳನ್ನು ಹಾಗೂ ರಾಜಕೀಯ ಪಕ್ಷಗಳನ್ನು ಅಲ್ಲಿ ಮತ್ತೆ ಕಣಕ್ಕಿಳಿಯದಂತೆ ನಿರ್ಬಂಧಿಸಬೇಕು ಎಂದು ಕೋರಲಾಗಿದೆ. ಈ ನಿಟ್ಟಿನಲ್ಲಿ ತಮ್ಮ ಅಭಿಪ್ರಾಯ ತಿಳಿಸಬೇಕು ಎಂದು ಕೇಂದ್ರ ಸರ್ಕಾರ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್‌ ಜಾರಿಗೊಳಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement