ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಕರಾವಳಿಯ ಐದು ತಾಲೂಕುಗಳಿಗೆ ಸೋಮವಾರ (ಜುಲೈ 8) ರಜೆ ಘೋಷಿಸಲಾಗಿದೆ.
ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 8 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.
ಜುಲೈ 8 ಮತ್ತು 9ರಂದು ಎರಡು ದಿನಗಳ ಕಾಲ ಕರಾವಳಿ ರಾಜ್ಯದ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಉತ್ತರಕನ್ನಡ, ದಕ್ಷಿಣ ಕನ್ನಡ, ಹಾಗೂ ಉಡುಪಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅರಬ್ಬೀ ಸಮುದ್ರದಲ್ಲಿ ಮೇಲುಬ್ಬರ ಉಂಟಾಗಿರುವ ಪರಿಣಾಮ ಭಾರಿ ಮಳೆಯಾಗುತ್ತಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ