ಲಕ್ನೋ : ಉತ್ತರ ಪ್ರದೇಶದ ಉನ್ನಾವೊದಲ್ಲಿ ಇಂದು, ಬುಧವಾರ ಬಸ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಮಂದಿ ಮೃತಪಟ್ಟಿದ್ದು, 19 ಮಂದಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರಲ್ಲಿ ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಿಹಾರದ ಸೀತಾಮರ್ಹಿಯಿಂದ ದೆಹಲಿಗೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಬಸ್ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಜನರು ವಾಹನದಿಂದ ಹಾರಿಹೋದರು ಎಂದು ಪೊಲೀಸರು ತಿಳಿಸಿದ್ದಾರೆ. ದೃಶ್ಯಗಳು ನೆಲದ ಮೇಲೆ ಬಿದ್ದ ದೇಹಗಳು, ಲೋಹದ ತುಂಡುಗಳು, ಒಡೆದ ಗಾಜು ಮತ್ತು ನಾಶವಾದ ವಸ್ತುಗಳನ್ನು ತೋರಿಸಿವೆ,
“ಇಂದು (ಬುಧವಾರ) ಮುಂಜಾನೆ 5:15 ರ ಸುಮಾರಿಗೆ ಬಿಹಾರದ ಮೋತಿಹಾರಿಯಿಂದ ಬರುತ್ತಿದ್ದ ಖಾಸಗಿ ಬಸ್ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ, ಅಪಘಾತದಲ್ಲಿ 18 ಜನರು ಸಾವಿಗೀಡಾಗಿದ್ದಾರೆ ಮತ್ತು 19 ಜನರು ಗಾಯಗೊಂಡಿದ್ದಾರೆ ಎಂದು ಉನ್ನಾವ್ ಜಿಲ್ಲಾಧಿಕಾರಿ ಗೌರಂಗ್ ರಾಠಿ ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.
ಅಪಘಾತದಲ್ಲಿ ಸತ್ತವರಿಗೆ ₹ 2 ಲಕ್ಷ ಮತ್ತು ಗಾಯಗೊಂಡವರಿಗೆ ₹ 50,000 ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ ಎಂದು ಅವರ ಕಚೇರಿ X ನಲ್ಲಿ ತಿಳಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ