ನವ ದೆಹಲಿ: ದೇಶದ ಮೊದಲ ಡಿಜಿಟಲ್ ಜನಗಣತಿಗೆ ಕೇಂದ್ರ ಸರ್ಕಾರ 3,768 ಕೋಟಿ ರೂ. ಹಣ ಮೀಸಲಿಟ್ಟಿದೆ ಎಂದು ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಹೇಳಿದರು.
advertisement
9535127775 / 9901837775 / 6364528715 / 08362775155 / https://icsmpucollege.com/
ಬಜೆಟ್ 2021ರ ಮಂಡನೆ ಸಮಯದಲ್ವೇಲಿ ಮಾತನಾಡಿದ ಅವರು, ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ ಪ್ರಕಟಿಸಿ ಡಿಜಿಟಲ್ ಜನಗಣತಿಗಾಗಿ ಕೇಂದ್ರ ಸರ್ಕಾರವು 3,768 ಕೋಟಿ ಮೀಸಲಿಡಲಿದೆ ಎಂದು ಹೇಳಿದರು.
ಅಲ್ಲದೆ, ಇದೇ ಮೊದಲ ಬಾರಿಗೆ ಕಾಗದರಹಿತ ಡಿಜಿಟಲ್ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದರು. ಕೋವಿಡ್-19ರ ನಿಮಯಗಳು ಜಾರಿಯಲ್ಲಿರುವುದರಿಂದ ಬಜೆಟ್ ಪ್ರತಿಗಳನ್ನು ಮುದ್ರಿಸಲಾಗಿಲ್ಲ. ಬಜೆಟ್ ಮಂಡನೆನಂತರ ಸಾಫ್ಟ್ ಪ್ಸಂರತಿಗಳನ್ನು ನೀಡಲಾಗುವುದು. ಸಾರ್ವಜನಿಕರು ಆ್ಯಪ್ ಮೂಲಕವೂ ಬಜೆಟ್ ಪ್ರತಿಗಳನ್ನು ಡೌನ್‌ಲೋಡ್ ಮಾಡಬಹುದಾಗಿದೆ ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ